ಕುವೆಂಪು ಪುನರಾಲೋಕನ

Author : ಜಿ.ಎಸ್. ಶಿವರುದ್ರಪ್ಪ



Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560 004

Synopsys

ಕುವೆಂಪು ಅವರ ಬದುಕು-ಬರಹಗಳ ಕುರಿತಾಗಿ ಜಿ.ಎಸ್.ಶಿವರುದ್ರಪ್ಪನವರು ಬರೆದಿರುವ ಕೃತಿ ಕುವೆಂಪು ಪುನರಾಲೋಕನ. ಜಿ.ಎಸ್.ಎಸ್. ಮತ್ತು ಹಿರಿಯ ಪತ್ರಕರ್ತೆ ವಿಜಯಮ್ಮ ಅವರು ಕುವೆಂಪುರವರನ್ನು ಸಂದರ್ಶಸಿದ ಪೂರ್ತಿ ಪಠ್ಯವನ್ನು ಸಹ ಈ ಪುಸ್ತಕದಲ್ಲಿ ಸಂಗ್ರಹಿಸಲಾಗಿದೆ. ಕುವೆಂಪು ಅವರ ಸಾಹಿತ್ಯ ವಿಮರ್ಶೆಯನ್ನು ಅತ್ಯಂತ ಸೂಕ್ಷ್ಮವಾಗಿ ಮಾಡಿರುವುದು ಈ ಕೃತಿಯಲ್ಲಿ ಕಾಣುತ್ತದೆ. 

 

About the Author

ಜಿ.ಎಸ್. ಶಿವರುದ್ರಪ್ಪ
(07 February 1926 - 23 December 2013)

ಸಮನ್ವಯ ಕವಿಗಳಲ್ಲಿ ಒಬ್ಬರು ಎಂದು ಗುರುತಿಸಲಾಗುವ ಡಾ.ಜಿ.ಎಸ್. ಶಿವರುದ್ರಪ್ಪ ಅವರು ವಿಮರ್ಶಕರಾಗಿಯೂ ಗಣನೀಯ ಸಾಧನೆ ಮಾಡಿದ್ದಾರೆ. ಗದ್ಯ-ಪದ್ಯಗಳೆರಡರಲ್ಲಿಯೂ ಮಾಗಿದ ಪ್ರತಿಭೆ ಅವರದು. ತಂದೆ ಗುಗ್ಗುರಿ ಶಾಂತವೀರಪ್ಪ ಮತ್ತು ತಾಯಿ ವೀರಮ್ಮ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ 1926ರ ಫೆಬ್ರುವರಿ 7ರಂದು ಜನಿಸಿದರು. ಶಾಲಾ ಉಪಾಧ್ಯಾಯರ ಮಗನಾದ ಜಿ.ಎಸ್.ಎಸ್ ಅವರು ಎಸ್.ಎಸ್.ಎಲ್.ಸಿ ಮುಗಿಯುತ್ತಿದ್ದಂತೆಯೇ ಬಡತನದ ಕಾರಣದಿಂದ ಸರಕಾರಿ ನೌಕರಿ ಹಿಡಿಯಬೇಕಾಯಿತು. ಗುಬ್ಬಿ ತಾಲ್ಲೂಕು ಕಚೇರಿಯಲ್ಲಿ ಗುಮಾಸ್ತರಾಗಿ ಸೇರಿದರು. ಆದರೆ ಓದಲೇಬೇಕೆಂಬ ಅದಮ್ಯ ಆಸೆಯಿಂದ ಕೆಲಸಕ್ಕೆ ವಿದಾಯ ಹೇಳಿ ಮೈಸೂರು ಮಹಾರಾಜ ಕಾಲೇಜಿನಲ್ಲಿ ಓದನ್ನು ಮುಂದುವರೆಸಿ ಬಿ.ಎ. ಪದವಿ (1949), ಸ್ವರ್ಣಪದಕದೊಂದಿಗೆ ...

READ MORE

Related Books