ಕುವೆಂಪು ಸಾಹಿತ್ಯ ಸಂವಾದ

Author : ಸಿ.ಪಿ.ಕೆ. (ಸಿ.ಪಿ. ಕೃಷ್ಣಕುಮಾರ್)

Pages 226

₹ 150.00




Year of Publication: 2016
Published by: ಪ್ರಸಾರಾಂಗ
Address: ಮೈಸೂರು ವಿಶ್ವವಿದ್ಯಾಲಯ

Synopsys

ಕುವೆಂಪು ಅವರ ಶಿಷ್ಯರಾಗಿದ್ದ ಹಿರಿಯ ಕವಿ ಸಿ.ಪಿ. ಕೃಷ್ಣಕುಮಾರ್ (ಸಿ.ಪಿ.ಕೆ.) ಅವರು ರಚಿಸಿದ ಕೃತಿಯಿದು. ಕುವೆಂಪು ಅವರ ಸಾಹಿತ್ಯ ಕುರಿತು ವಿಭಿನ್ನ ಒಳನೋಟಗಳಿರುವ ಟಿಪ್ಪಣಿಗಳನ್ನು ಸಿ.ಪಿ.ಕೆ. ನೀಡಿದ್ದಾರೆ. 

About the Author

ಸಿ.ಪಿ.ಕೆ. (ಸಿ.ಪಿ. ಕೃಷ್ಣಕುಮಾರ್)
(08 April 1939)

ಲೇಖಕರು, ಸಂಶೋಧಕರು ಆದ ಸಿ.ಪಿ.ಕೃಷ್ಣಕುಮಾರ್ ಅವರು 08-04-1939ರಂದು ಮೈಸೂರು ಜಿಲ್ಲೆಯ ಕೃಷ್ಣರಾಜ ನಗರ ತಾಲೂಕಿನ ಚಿಕ್ಕನಾಯಕನ ಹಳ್ಳಿಯಲ್ಲಿ ಜನಿಸಿದರು. ತಂದೆ ಪುಟ್ಟೇಗೌಡರು ಮೋಜಿಣಿದಾರರಾಗಿ ಸರಕಾರಿ ಕೆಲಸದಲ್ಲಿದ್ದರು. ಕೃಷ್ಣಕುಮಾರ್ ಅವರು 9 ತಿಂಗಳ ಮಗುವಾಗಿದ್ದಾಗಲೇ ತಾಯಿ ತೀರಿಕೊಂಡರು.  ಸಿಪಿಕೆ ಎಂದೇ ಪ್ರಸಿದ್ಧರಾದ ಅವರು ಜೆ.ಎಸ್.ಎಸ್. ಮಹಾರಾಜಾ ಕಾಲೇಜಿನಿಂದ ಬಿ.ಎ. (ಆನರ್ಸ್) ಪದವಿಯನ್ನು ಪಡೆದರು. 1961 ರಲ್ಲಿ ಮಾನಸಗಂಗೋತ್ರಿಯಲ್ಲಿ ಎಂ.ಎ. ಪದವಿ ಪಡೆದರು.  1962ರಲ್ಲಿ ಸಿ.ಪಿ.ಕೆ. ಅವರ ಮದುವೆ ಶಾರದಾ ಅವರ ಜೊತೆಗೆ ಜರುಗಿತು. 1964ರಲ್ಲಿ ಮಹಾರಾಜಾ ಕಾಲೇಜಿನಲ್ಲಿ ಅಧ್ಯಾಪಕರಾದರು.1967ರಲ್ಲಿ ಮಾನಸ ಗಂಗೋತ್ರಿಯಲ್ಲಿ ಅಧ್ಯಾಪಕರಾದರು. 1969ರಲ್ಲಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ...

READ MORE

Related Books