ಎಲ್.ಎಸ್. ಶೇಷಗಿರಿ ರಾವ್

Author : ಪಿ. ವಿ. ನಾರಾಯಣ

Pages 116

₹ 60.00




Year of Publication: 2008
Published by: ನವಕರ್ನಾಟಕ ಪ್ರಕಾಶನ
Address: ನವಕರ್ನಾಟಕ ಪಬ್ಲಿಕೇಷನ್ಸ್‌ (ಪ್ರೈ.) ಲಿ. ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಅಂಚೆಪಟ್ಟಿಗೆ ಸಂಖ್ಯೆ:5159 ಬೆಂಗಳೂರು-560 001
Phone: (080-22203580/01/02)

Synopsys

ಕನ್ನಡದ ಉತ್ತಮ ವಿಮರ್ಶಕರಲ್ಲಿ ಒಬ್ಬರಾಗಿದ್ದ ಪ್ರೊ. ಎಲ್‌.ಎಸ್‌. ಶೇಷಗಿರಿರಾವ್‌ ಆಂಗ್ಲಭಾಷೆಯ ಮೇಲೆ ಉತ್ತಮ ಹಿಡಿತ ಹೊಂದಿದ್ದವರು. ಹತ್ತೊಂಬತ್ತನೇ ವಯಸ್ಸಿಗೆ ಪ್ರಾಧ್ಯಾಪಕರಾದ ರಾಯರು ನಂತರ ಹಲವು ವಿಶ್ವವಿದ್ಯಾಲಯಗಳಲ್ಲಿ ಸೇವೆ ಸಲ್ಲಿಸಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಮೊದಲ ಅಧ್ಯಕ್ಷರು ಕೂಡ. ಉಡುಪಿಯಲ್ಲಿ ನಡೆದ 74ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು. 

’ಫ್ರಾನ್ಸ್ ಕಾಫ್ಕ’, ’ಗ್ರೀಕ್ ರಂಗಭೂಮಿ ಮತ್ತು ನಾಟಕ’, ’ಇಂಗ್ಲೀಷ್ ಸಾಹಿತ್ಯ ಚರಿತ್ರೆ’, ’ಟಿ.ಪಿ. ಕೈಲಾಸಂ’ ಇವರ ಕೆಲವು ಪ್ರಮುಖ ಕೃತಿಗಳು. ನಿಘಂಟು ತಜ್ಞರೂ ಆಗಿದ್ದ ಅವರು ವಿವಿಧ ಪ್ರಕಾಶನಗಳಿಗೆ ನಿಘಂಟಗಳನ್ನು ರಚಿಸಿಕೊಟ್ಟಿದ್ದಾರೆ. 

ಇವರ ಜೀವನ ಸಾಧನೆಗಳನ್ನು ಕೃತಿಯಲ್ಲಿ ವಿವರಿಸಲಾಗಿದೆ. 

About the Author

ಪಿ. ವಿ. ನಾರಾಯಣ
(18 December 1942)

ಡಾ. ಪಿ. ವಿ. ನಾರಾಯಣ, ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರವಾಚಕರಾಗಿದ್ದರು. ತಂದೆ ಪಿ.ವೆಂಕಪ್ಪಯ್ಯ, ತಾಯಿ ನರಸಮ್ಮ. ಬೆಂಗಳೂರಿನಲ್ಲಿ 1942ರ ಡಿ.18 ರಂದು ಹುಟ್ಟಿದರು.  ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. (ಕನ್ನಡ) ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. (ಇಂಗ್ಲಿಷ್), “ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ” ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪಡೆದಿದ್ದಾರೆ.. ವಿಮರ್ಶೆ/ಸಂಶೋಧನೆ-ಬಳ್ಳಿಗಾವೆ, ಕಾಯತತ್ತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ ಮೊದಲಾದ 16ಕೃತಿಗಳು. ಸಂಪಾದಿತ-ಬಸವ ಪುರಾಣ ಸಂಗ್ರಹ, ಪದ್ಮಿನೀ ಪರಿಣಯ ಮೊದಲಾದ 5 ಕೃತಿಗಳು. ಅನುವಾದ-ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ  ಮುಂತಾದ 12 ಕೃತಿಗಳು. ಕಾದಂಬರಿಗಳು-ಸಾಮಾನ್ಯ, ...

READ MORE

Related Books