ಲೋಕಕಥನ

Author : ಮಲ್ಲೇಪುರಂ ಜಿ. ವೆಂಕಟೇಶ್‌

Pages 248

₹ 180.00




Year of Publication: 2018
Published by: ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ
Address: # 9, 'ರಮ್ಯ', ಗೋಕುಲಂ, 3ನೆಯ ಹಂತ, ಮೈಸೂರು.
Phone: 9880749412

Synopsys

ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರು ಆಗಾಗ ಬರೆದ ಲೇಖನಗಳ ಸಂಗ್ರಹ ಕೃತಿ-ಲೋಕ ಕಥನ. ಪ್ರಾಚೀನ ಸಾಹಿತ್ಯವನ್ನು ವಿಶ್ಲೇಷಿಸಿ, ವಿಮರ್ಶಿಸುವ ಲೇಖಕರು ಆ ಸಾಹಿತ್ಯದ ಮಹತ್ವವನ್ನು, ಪ್ರಾಚೀನ-ಕವಿ-ಚಿಂತಕರ ಪರಿಚಯವನ್ನು ಮಾಡಿಕೊಟ್ಟಿದ್ದಾರೆ. ಭಾರತೀಯ ಕಾವ್ಯ ಶಾಸ್ತ್ರ ಪರಿಭಾಷೆ, ಧ್ಯಾನಸೂತ್ರ ಇತ್ಯಾದಿ ಮಹತ್ವದ ಹಾಗೂ ಗಂಭೀರ ಕೃತಿಗಳನ್ನು ರಚಿಸಿರುವ ಅವರ ಲೇಖನಗಳು ಸಾಹಿತ್ಯಕ ಅಂಶಗಳಿಂದ ದಾಖಲಾರ್ಹವಾಗಿವೆ. ಇಂತಹ ಲೇಖನಗಳ ಕೃತಿ-ಲೋಕ ಕಥನ.

About the Author

ಮಲ್ಲೇಪುರಂ ಜಿ. ವೆಂಕಟೇಶ್‌
(05 June 1952)

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದ ಮಲ್ಲೇಪುರಂ ಜಿ. ವೆಂಕಟೇಶ ಅವರು 1952, ಜೂನ್ 5ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ಜನಿಸಿದರು. ತಂದೆ ಗಂಗಯ್ಯ, ತಾಯಿ ವೆಂಕಟಮ್ಮ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್‌ಸೆಕೆಂಡರಿ ಶಾಲೆ. ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್. ಸಿದ್ಧಗಂಗಾ ಮಠದಲ್ಲಿ ಕನ್ನಡ ಪಂಡಿತ್ ಮತ್ತು ಸಂಸ್ಕೃತ ಅಲಂಕಾರವಿದ್ವತ್ ವ್ಯಾಸಂಗ. ವಿದ್ವಾನ್ ಬಿ. ವೆಂಕಟರಾಮಭಟ್ಟ,  ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ. ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿAದ ಅದ್ವೈತ ವೇದಾಂತದ ಅನುಗ್ರಹ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ., ಮೂರನೇ ರ‍್ಯಾಂಕಿನೊಡನೆ ಕುವೆಂಪು ಚಿನ್ನದ ...

READ MORE

Related Books