ಲೋಕದ ಬೆಡಗು

Author : ಮಲ್ಲೇಪುರಂ ಜಿ. ವೆಂಕಟೇಶ್‌

Pages 244

₹ 250.00




Year of Publication: 2019
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು - 560 004
Phone: 080-26617100/26617755

Synopsys

‘ಲೋಕದ ಬೆಡಗು’ ಮಲ್ಲೇಪುರಂ ಜಿ. ವೆಂಕಟೇಶ್ ಅವರ ಆಧ್ಮಾತ್ಮಿಕ ಬರಹಗಳ ಸಂಕಲನ. ಈ ಕೃತಿಯಲ್ಲಿ ಇಪ್ಪತ್ತೈದು ಮಹಾಸಂತರ ಲೋಕಕಥನವನ್ನು ದಾಖಲಿಸಿದ್ದಾರೆ. ತಮಗೆ ಆಧ್ಯಾತ್ಮದಲ್ಲಿ ಆಸಕ್ತಿ ಬಂದ ವಿಚಾರವನ್ನು ಹೇಳುತ್ತಾ ತಮ್ಮ ಬದುಕಿನ ಮಹತ್ವದ ಘಟನೆಗಳನ್ನು ವಿಹರಿಸಿದ್ದಾರೆ. ಜೊತೆಗೆ ಆಧ್ಯಾತ್ಮಿಕ ವಿಚಾರಗಳಲ್ಲಿ ಹಿಡಿದಿಟ್ಟ ಮಹಾ ಸಂತರ ಬದುಕಿನ ಕುರಿತು ಈ ಕೃತಿಯಲ್ಲಿ ಬರೆದಿದ್ದಾರೆ. 

About the Author

ಮಲ್ಲೇಪುರಂ ಜಿ. ವೆಂಕಟೇಶ್‌
(05 June 1952)

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಮೊದಲ ಕುಲಪತಿಗಳಾಗಿದ್ದ ಮಲ್ಲೇಪುರಂ ಜಿ. ವೆಂಕಟೇಶ ಅವರು 1952, ಜೂನ್ 5ರಂದು ಬೆಂಗಳೂರು ಜಿಲ್ಲೆಯ ನೆಲಮಂಗಲದಲ್ಲಿ ಜನಿಸಿದರು. ತಂದೆ ಗಂಗಯ್ಯ, ತಾಯಿ ವೆಂಕಟಮ್ಮ. ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾಭ್ಯಾಸ ನೆಲಮಂಗಲದ ಸರ್ಕಾರಿ ಮತ್ತು ಹೈಯರ್‌ಸೆಕೆಂಡರಿ ಶಾಲೆ. ಮೊದಲ ಸಂಸ್ಕೃತ-ಕನ್ನಡ ಗುರುಗಳು ಎಸ್.ವಿ. ರಾಮಸ್ವಾಮಿ ಅಯ್ಯಂಗಾರ್. ಸಿದ್ಧಗಂಗಾ ಮಠದಲ್ಲಿ ಕನ್ನಡ ಪಂಡಿತ್ ಮತ್ತು ಸಂಸ್ಕೃತ ಅಲಂಕಾರವಿದ್ವತ್ ವ್ಯಾಸಂಗ. ವಿದ್ವಾನ್ ಬಿ. ವೆಂಕಟರಾಮಭಟ್ಟ,  ಇವರಲ್ಲಿ ಕಾವ್ಯಾಲಂಕಾರಗಳ ಅಧ್ಯಯನ. ಬೆಂಗಳೂರಿನ ಶ್ರೀರಾಮಕೃಷ್ಣಾಶ್ರಮದಲ್ಲಿ ಸ್ವಾಮಿ ಆದಿದೇವಾನಂದರಿAದ ಅದ್ವೈತ ವೇದಾಂತದ ಅನುಗ್ರಹ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ., ಮೂರನೇ ರ‍್ಯಾಂಕಿನೊಡನೆ ಕುವೆಂಪು ಚಿನ್ನದ ...

READ MORE

Related Books