ಮಾಯೆ

Author : ಆಶಾ ರಘು

Pages 240

₹ 250.00
Year of Publication: 2021
Published by: ಸಾಹಿತ್ಯಲೋಕ ಪಬ್ಲಿಕೇಷನ್ಸ್
Address: #745, 12 ನೇ ಮುಖ್ಯ ರಸ್ತೆ, ರಾಜಾಜಿನಗರ, ಬೆಂಗಳೂರು-560010
Phone: 9945939436

Synopsys

'ಮಾಯೆ’ ಲೇಖಕಿ ಆಶಾ ರಘು ಅವರ ಕಾದಂಬರಿ. ಚಾರಿತ್ರಿಕ ಹಿನ್ನೆಲೆಯಲ್ಲಿ ಬೆಳೆಯುವ ಇಲ್ಲಿನ ಕತಾಹಂದರವು, ಅದರ ಪಾತ್ರಗಳ ನೆನಪುಗಳ ಸರಮಾಲೆಯಾಗಿಯೇ ಓದುಗನಿಗೆ ತೆರೆದುಕೊಳ್ಳುವುದು ಕಾದಂಬರಿಯ ವಿಶೇಷ. ಕೃತಿಗೆ ಬೆನ್ನುಡಿ ಬರೆದಿರುವ ಕೆ.ಎನ್ ಗಣೇಶಯ್ಯ `ಬಲವಂತದಲ್ಲಿ ಪ್ರೀತಿಯನ್ನು ಪಡೆಯುವ ಛಲ, ನಿಧಿಯ ಬೇಟೆ, ಆಸ್ತಿಯ ಆಸೆ, ಸಿಂಹಾಸನದ ಉತ್ತರಾಧಿಕಾರಿಯ ಜನ್ಮ ರಹಸ್ಯ, ಮುಂತಾದ ಹೆಗ್ಗುರುತುಗಳಿಗೆ ಓದುಗರನ್ನು ಕಟ್ಟಿಹಾಕಿ, ಆ ಹೆಗ್ಗುರುತುಗಳ ನಕ್ಷೆಯೊಳಗೆ ಕತೆಯನ್ನು ಬೆಳೆಸುತ್ತಾರೆ ಲೇಖಕಿ. ಇಲ್ಲಿ ಎರಡು ಬೋಧನೆಗಳು ವ್ಯಕ್ತವಾಗುತ್ತದೆ. ಸುಖ ಪಡೆಯಲೆಂದು ಹೆಣ್ಣು, ಹೊನ್ನು ಹಾಗೂ ಮಣ್ಣಿನ ಹಿಂದೆ ಹೋಗುವಂತಹ ವ್ಯಕ್ತಿ ಯಾವ ರೀತಿಯಾಗಿ ಕಷ್ಟಗಳನ್ನು ಪಡುತ್ತಾನೆ ಹಾಗೂ ಈ ಮೂರು ಆಸೆಗಳನ್ನು ತೊರೆದ ಮನುಷ್ಯನ ಜೀವಕ್ಕೆ ಆಹ್ಲಾದಕರ ಆನಂದದ ಜೊತೆಗೆ ಪಾರಮಾರ್ಥಿಕ ಸುಖವೂ ದೊರೆಯುತ್ತದೆ ಎಂಬುದನ್ನು ಲೇಖಕಿ ವಿವರಿಸುತ್ತಾರೆ. ಕಥಾನಾಯಕ ಅತಿಯಾಗಿ ಪ್ರೀತಿಸಿದ್ದ ಬಾಲ್ಯದ ಪ್ರೇಯಸಿಯು ವಿಧಿಯ ಕೈಚಳಕದಿಂದ ದೂರವಾದ ನಂತರ, ಆಕೆಯ ಸ್ಥಾನದಲ್ಲಿ ನೆಲೆಯಾದ ಮತ್ತೊಂದು ಹೆಣ್ಣು ಅವನ ನೈತಿಕ ಸಮತೋಲನವನ್ನು ಸಂಪೂರ್ಣವಾಗಿ ಕದಡಿ ಅವನಲ್ಲಿ "ಮಾನವನ ಸಹಜ ದುರಾಸೆಗಳನ್ನು ಆಳವಾಗಿ ಬಿತ್ತಿ ಬೆಳೆಸುತ್ತಾಳೆ. ಅದರ ಪರಿಣಾಮವಾಗಿ, ತನ್ನದಲ್ಲದ ಮಣ್ಣನ್ನು ಕಬಳಿಸಿ, ಪರರ ಹೊನ್ನಿಗೆ, ಹೆಣ್ಣಿಗೆ ಕೈ ಚಾಚಿದ ಅವನ ಜೀವನ ಕೊನೆಗೆ ಸುಂಟರಗಾಳಿಗೆ ಸಿಕ್ಕ ತರಗೆಲೆಯಂತಾಗುತ್ತದೆ ಈತನ ಅಮಾನವೀಯ ಕೃತ್ಯಗಳಿಗೆ ಕನ್ನಡಿ ಹಿಡಿಯುವಂತೆ ಸೃಷ್ಟಿಸಲಾಗಿರುವ ಮತ್ತೊಂದು ಪಾತ್ರದ ಅಮಾಯಕ ವ್ಯಕ್ತಿ ತಾನು ವಾರಸುದಾರನಾಗಿದ್ದ ಹೊನ್ನನ್ನೂ, ಅಧಿಕಾರವನ್ನೂ ದೂರ ತಳ್ಳಿ, ಸ್ನೇಹಕ್ಕೆ, ಸತ್ಯಕ್ಕೆ ಜೋತುಬಿದ್ದ ಕಾರಣ, ಸರಳವಾದರೂ ಸುಂದರ ಹಾಗೂ ಆನಂದಮಯ ಜೀವನ ಸಾಗಿಸುತ್ತಾನೆ. ಒಟ್ಟಿನಲ್ಲಿ, ಸುತ್ತಲೂ ಸುಖ  ಇದ್ದರೂ ಅದನ್ನು ಗ್ರಹಿಸದೆ, ಮತ್ತೆಲ್ಲೋ ಅದು ಸಿಗುತ್ತದೆ ಎಂಬ ಭ್ರಮೆಯ 'ದೂರ ತೀರಕೆ ಕರೆದೊಯ್ಯುವ ’ ಮೋಹನ(ದ) ಮುರುಳಿ’ಯ ಕರೆಗೆ ಬಲಿಯಾಗುವ ಎಲ್ಲ ಮನಸುಗಳಿಗೆ ಎಚ್ಚರಿಕೆಯ ಕರೆ ಗಂಟೆಯಂತೆ ಆಶಾ ಅವರ ಈ ಕಾದಂಬರಿ ಮೂಡಿ ಬಂದಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ. 

About the Author

ಆಶಾ ರಘು
(18 June 1979)

ಕಾದಂಬರಿಗಾರ್ತಿಯಾದ ಆಶಾ ರಘುರವರು ಹುಟ್ಟಿದ್ದು 1979ರ ಜೂನ್ 18 ನೇ ತಾರೀಖಿನಂದು. ಬೆಂಗಳೂರಿನವರೇ ಆದ ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿರುವ ಇವರು, ಇದೀಗ ಪೂರ್ಣ ಪ್ರಮಾಣದಲ್ಲಿ ಸಾಹಿತ್ಯ ಕೃಷಿಯಲ್ಲಿಯೇ ತೊಡಗಿಸಿಕೊಂಡಿದ್ದಾರೆ.  'ಆವರ್ತ', 'ಗತ', 'ಮಾಯೆ', 'ಆರನೇ ಬೆರಳು', 'ಬೊಗಸೆಯಲ್ಲಿ ಕಥೆಗಳು', 'ಅಪರೂಪದ ಪುರಾಣ ಕಥೆಗಳು', 'ಚೂಡಾಮಣಿ', 'ಕ್ಷಮಾದಾನ', 'ಬಂಗಾರದ ಪಂಜರ ಮತ್ತು ಇತರ ಮಕ್ಕಳ ನಾಟಕಗಳು' ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಪಳಕಳ ಸೀತಾರಾಮಭಟ್ಟ ...

READ MORE

Related Books