ಬೆಳಗಾವಿಯ ನಾಗನೂರು ಶ್ರೀ ಶಿವಬಸವ ಸ್ವಾಮಿ ಅವರ ಜೀವನಾಧಾರಿತ ಕಾದಂಬರಿ-ಮಹಾವೃಕ್ಷ ಲೇಖಕ ಬಿ.ಆರ್. ಪೊಲೀಸ ಪಾಟೀಲ ಅವರು ಬರೆದಿದ್ದು, ಕೃತಿಗೆ ಮುನ್ನುಡಿ ಬರೆದಿರುವ ಗುರುಲಿಂಗ ಕಾಪಸೆ ಅವರು “ಶ್ರೀಗಳವರ ಜೀವನದ ಹಲವಾರು ಸಂಗತಿಗಳನ್ನು ಕಣ್ಣಿಗೆ ಕಟ್ಟುವಂತೆ ಚಿತ್ರಿಸುವ ಈ ಕಾದಂಬರಿಯಲ್ಲಿ ಸಾಮಾಜಿಕ, ಶೈಕ್ಷಣಿಕ, ಜನಹಿತದ ಅನೇಕ ಕಾರ್ಯಗಳಿರುವಂತೆ ಇತಿಹಾಸದಲ್ಲಿ ದಾಖಲೆಯಾಗಿ ಉಳಿಯುವ, ಕನ್ನಡ ಕುಲಕೋಟಿ ಸದಾ ಸ್ಮರಿಸುವಂಥ ಹಲವು ಸಂಗತಿಗಳೂ ಇವೆ. ಇದು ಕಾದಂಬರಿಯೂ ಅಹುದು. ಕಾದಂಬರಿ ರೂಪದ ಇತಿಹಾಸವೂ ಅಹುದು” ಎಂದು ಪ್ರಶಂಸಿಸಿದ್ದಾರೆ. ಈ ಕೃತಿಗೆ 2019ರ ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ ಲಭಿಸಿದೆ.
ಲಾವಣಿ, ತತ್ವಪದ, ಬಯಲಾಟಗಳನ್ನು ಬರೆದು ತಂಡ ಕಟ್ಟಿಕೊಂಡು ಕಳೆದ ನಾಲ್ಕುವರೆ ದಶಕಗಳಿಂದಲೂ ಪ್ರಯೋಗಿಸುತ್ತಾ ಬಂದಿರುವ ಪೊಲೀಸ್ ಪಾಟೀಲ ಅವರ ಹಾಡಿನ ಮೋಡಿಗೆ ತಲೆಬಾಗದವರಿಲ್ಲ. ಸಾಹಿತ್ಯ ಎಲ್ಲಾ ಪ್ರಕಾರಗಳಲ್ಲಿಯೂ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಇವರು ನೂರಿಪ್ಪತ್ತು ಹೆಚ್ಚಿನ ಕೃತಿಗಳನ್ನು ರಚಿಸಿದ್ದಾರೆ. 93 ನಾಟಕಗಳನ್ನು ಇವರು ರಚಿಸಿದ್ದಾರೆ. ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ದ.ರಾ. ಬೇಂದ್ರೆ ಪ್ರಶಸ್ತಿ, ನಾಡಚೇತನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ವಿಶೇಷ ಪುರಸ್ಕಾರ ಸೇರಿದಂತೆ ಹಲವಾರು ಪ್ರಶಸ್ತಿಗಳು ಇವರಿಗೆ ಸಂದಿವೆ. ...
READ MORE