ಮಹೇಂದ್ರಲಾಲ್ ಸರ್ಕಾರ್

Author : ಬೆ.ಗೋ. ರಮೇಶ್

Pages 120

₹ 15.00




Year of Publication: 1975
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019.
Phone: 9945036300

Synopsys

ಮಹೇಂದ್ರಲಾಲ್ ಸರ್ಕಾರ್ ಜೀವನಚರಿತ್ರೆ ಪುಸ್ತಕವನ್ನು ಲೇಖಕ ಬೆ.ಗೋ. ರಮೇಶ್‌ ಅವರು ರಚಿಸಿದ್ದಾರೆ. ಈ ಪುಸ್ತಕದಲ್ಲಿ ವಿಜ್ಞಾನದಲ್ಲಿ ಸಂಶೋಧನೆ ನಡೆಸಬೇಕು ಎಂಬ ಕಲ್ಪನೆಯೇ ಭಾರತದಲ್ಲಿ ಇಲ್ಲದಿದ್ದ ಕಾಲದಲ್ಲಿ ವೈಜ್ಞಾನಿಕ ಸಂಶೋಧನೆಗೆ ಒಂದು ಸಂಸ್ಥೆಯನ್ನು ಸ್ಥಾಪಿಸಿದ ಮಹೇಂದ್ರಲಾಲ್ ಬಗ್ಗೆ ಹೇಳಲಾಗಿದೆ. ಭಾರತದಲ್ಲಿ ವಿಜ್ಞಾನದ ಅಧ್ಯಯನವನ್ನು ಬೆಳೆಸಲು ತಮ್ಮ ಕಾಲ, ಆರೋಗ್ಯ, ಶಕ್ತಿ, ಹಣ ಎಲ್ಲವನ್ನೂ ಅರ್ಪಿಸಿದರು. ಹೋಮಿಯೋಪತಿ ವೈದ್ಯಪದ್ಧತಿಯನ್ನು ಭಾರತದಲ್ಲಿ ಪ್ರಚಾರ ಮಾಡಿದರು ಎಂದು ಅವರ ಕುರಿತಾಗಿ ಇಲ್ಲಿ ಬರೆಯಲಾಗಿದೆ. 

About the Author

ಬೆ.ಗೋ. ರಮೇಶ್
(22 August 1945)

ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...

READ MORE

Related Books