ಮಳೆಬಿಲ್ಲ ನೆರಳು

Author : ಜೆ.ಬಾಲಕೃಷ್ಣ

Pages 224

₹ 150.00




Published by: ಪ್ರಗತಿ ಗ್ರಾಫಿಕ್ಸ್

Synopsys

ಇದು ಬಾಲಕೃಷ್ಣ ಅವರ ವಿಜ್ಞಾನ ಲೇಖನಗಳ ಸಂಕಲನ. ’ವಿಜ್ಞಾನದಲ್ಲಿ ರಹಸ್ಯ ಬಗೆದಷ್ಟೂ ನಿಗೂಢವಾಗುತ್ತದೆ ಆದ್ದರಿಂದಲೇ ಇಲ್ಲಿನ ಪ್ರತೀ ಪ್ರಬಂಧದಲ್ಲಿಯೂ ತನ್ನದೇ ಅವಲೋಕನೆಯತ್ತ ನೂಕಿ, ಆ ಪ್ರಬಂಧ ರಚನೆಯಲ್ಲಿಯೇ ತಾನೂ ಒಂದು ಪಾತ್ರವಾಗುವಂತೆ ಪ್ರೇರೆಪಿಸುತ್ತಾರೆ. ಇದು ಬಾಲು ಅವರ ಲೇಖನಗಳ ಅನನ್ಯತೆ’ ಎನ್ನುವುದು ಸೃಜನಶೀಲ ವೈಜ್ಞಾನಿಕ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಡಾ.ಕೆ.ಎನ್.ಗಣೇಶಯ್ಯನವರ ಅಭಿಪ್ರಾಯ.

ಪ್ರೊ.ವಿ.ಚಂದ್ರಶೇಖರ ನಂಗಲಿ ಅವರ ಪ್ರಕಾರ ಮಾನವ ಕೇಂದ್ರಿತವಾದ ಎಲ್ಲ ಬಗೆಯ ರಚನೆಗಳನ್ನು ನಿರಾಕರಿಸುತ್ತಾ ಉಳ್ಳವರು ಹುಟ್ಟುಹಾಕಿದ ಸುಳ್ಳು ಸೃಷ್ಠಿಯ ‘ಸಚರಾಚರವೆಲ್ಲ’ ರಚನೆಗೆ ಬಾರದಿರುವ ನೆಲೆಗೆ ನಮ್ಮನ್ನು ಕರೆದೊಯ್ಯುವ ಇಲ್ಲಿನ ಬರಹಗಳು ಅಪರಿಮಿತದ ಕತ್ತಲೆಯೊಳಗೆ ಈಜುತ್ತಿರುವ ವಿಪರೀತದ ಬೆಳಕಿನ ಹುಳುಗಳಾಗಿ ಕಾಣುತ್ತದೆ.

About the Author

ಜೆ.ಬಾಲಕೃಷ್ಣ

ಬೆಂಗಳೂರಿನ ಕೃಷಿವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಜೆ.ಬಾಲಕೃಷ್ಣ ಅವರು ಕೃಷಿ ಸೂಕ್ಷ್ಮಜೀವಿ ಶಾಸ್ತ್ರದಲ್ಲಿ ಸ್ನಾತಕೊತ್ತರ ಹಾಗೂ ಕನ್ನಡ ಕೃಷಿ ವಿಜ್ಞಾನ ಸಾಹಿತ್ಯದ ಅಧ್ಯಾಯನಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.ಕಾರ್‍ಟೋನಿಸ್ಟ್ ಆಗಿಯು ಗುರುತಿಸಿಕೊಂಡಿರುವ ಬಾಲಕೃಷ್ಣರವರ ಆಸಕ್ತಿಯ ಕ್ಷೇತ್ರಗಳು ಜೀವವೈವಿಧ್ಯದಷ್ಟೇ ವಿಸ್ತಾರವಾದವು. ವಿಜ್ಞಾನದಿಂದ ಮೊದಲ್ಗೊಂಡು ಸಾಹಿತ್ಯ,ಸೂಫಿ,ಝೆನ್,ತತ್ವದರ್ಶನದ ವರೆಗೂ ಅವರ ಜ್ಞಾನ ಹರಡಿಕೊಂಡಿದೆ. ...

READ MORE

Related Books