ಮಣ್ಣಿನ ಮಾತುಗಳು

Author : ದೊಡ್ಡರಂಗೇಗೌಡ

Pages 267

₹ 176.00
Year of Publication: 2020
Published by: ಸಪ್ನ ಬುಕ್ ಹೌಸ್
Address: #3 ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-560009
Phone: 08040114455

Synopsys

ಖ್ಯಾತ ಕವಿ ಹಾಗೂ ಸಾಹಿತಿ ಡಾ. ದೊಡ್ಡರಂಗೇಗೌಡ ಅವರ ಕವನ ಸಂಕಲನ-ಮಣ್ಣಿನ ಮಾತುಗಳು. ಇಲ್ಲಿಯ ಕವಿತೆಗಳು ಚೌಪದಿಗಳ ರೂಪದಲ್ಲಿದ್ದು, ಮುಕ್ತ ಅಭಿವ್ಯಕ್ತಿಯ ಸಂಕೇತಗಳಾಗಿವೆ. ಇವು ಆಡುಮಾತಿನ ಲಯಗಾರಿಕೆಯ ಈ ಚೌಪದಿಗಳು ಜೀವನ ಮೌಲ್ಯಗಳನ್ನು ಪ್ರತಿಪಾದಿಸುತ್ತವೆ. ರಚನೆಯಲ್ಲಿ ತೀರಾ ಸರಳವಾಗಿದ್ದು, ಸಮರ್ಥ ಶೈಲಿ ಹಾಗೂ ಅಂತಃಸತ್ವವನ್ನು ಹೊಂದಿವೆ. ಬಾಳದಾರಿಯಲ್ಲಿ ಪ್ರೀತಿ-ಪ್ರೇಮವೇ ಜೀವಾಳವಾಗಿಸಿಕೊಳ್ಳಬೇಕು ಎಂಬ ಸಂದೇಶವಿದೆ. ಸಾಮಾಜಿಕ ಹೊಣೆಗಾರಿಕೆಯನ್ನು ಎಚ್ಚರಿಸುವ ಕವಿತೆಗಳು ಇಲ್ಲಿವೆ.

About the Author

ದೊಡ್ಡರಂಗೇಗೌಡ
(07 February 1946)

ಕವಿ, ಸಾಹಿತಿ ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ ಕುರುಬರಹಳ್ಳಿಯಲ್ಲಿ 1946 ಫೆಬ್ರುವರಿ 7ರಂದು ಜನಿಸಿದರು. ತಂದೆ ರಂಗೇಗೌಡ, ತಾಯಿ ಅಕ್ಕಮ್ಮ.  ಬೆಂಗಳೂರು ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಇವರು, ‘ಕನ್ನಡ ನವೋದಯ ಕಾವ್ಯ- ಒಂದು ಪುನರ್‌ಮೌಲ್ಯಮಾಪನ ’ ಎಂಬ ಪ್ರಬಂಧ ಮಂಡಿಸಿ ಪಿಎಚ್‌ಡಿ ಪಡೆದರು. ಬೆಂಗಳೂರಿನ ಎಸ್‌.ಎಲ್‌.ಎನ್‌ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.  ಕಾಲೇಜು ದಿನಗಳಲ್ಲೇ ಕವನ, ಕತೆ ರಚನೆಯಲ್ಲಿ ತೊಡಗಿಕೊಂಡಿದ್ದ ಇವರು ಸುಮಾರು 500ಕ್ಕೂ ಹೆಚ್ಚು ಚಲನಚಿತ್ರ ಗೀತೆಗಳನ್ನು ಬರೆದಿದ್ದಾರೆ. ಕಾವ್ಯ, ವಿಮರ್ಶಾ ಕೃತಿಗಳು, ಭಾವಗೀತೆ ಹಾಗೂ ...

READ MORE

Related Books