ಮರೆತು ಹೋಗಿರುವ ಮಹಾನಗರಗಳು

Author : ಜಿ.ಎಂ. ಕೃಷ್ಣಮೂರ್ತಿ

₹ 80.00




Year of Publication: 2016
Published by: ಸಪ್ನ ಬುಕ್ ಹೌಸ್
Address: # 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು

Synopsys

ಲೇಖಕ ಜಿ.ಎಂ. ಕೃಷ್ಣಮೂರ್ತಿ ಅವರ ಕೃತಿ ಮರೆತು ಹೋಗಿರುವ ಮಹಾನಗರಗಳು. ಪ್ರಕೃತಿ ವಿಕೋಪಗಳಡಿ ವಿನಾಶಕ್ಕೆ ಒಳಗಾದ ಭೂಪ್ರದೇಶಗಳ ಪೈಕಿ ಮಹಾನಗರಗಳು ಪ್ರಮುಖವಾಗಿವೆ. ಅಂತಹ ನಗರಗಳ ಇತಿಹಾಸವನ್ನು ಹುಡುಕಿ ಆ ಕುರಿತು ಮಾಹಿತಿ ಸಂಗ್ರಹಿಸಿ ನೀಡಿದ ವಿಶೇಷ ಕೃತಿ ಇದು. ಮಹಾನಗರಗಳನ್ನು ಕಟ್ಟುವ ಮನುಷ್ಯ, ಪ್ರಕೃತಿಯ ಮುಂದೆ ಎಷ್ಟೊಂದು ಸಣ್ಣವನು ಎಂಬುದರ ಅರಿವು ಮೂಡಿಸುತ್ತದೆ ಈ ಕೃತಿ. ಇತಿಹಾಸದಲ್ಲಿ ಒಂದು ಕಾಲಕ್ಕೆ ವೈಭವದಿಂದ ಮೆರೆದ ಮಹಾನಗರಗಳು ಈ ಹೇಳಹೆಸರಿಲ್ಲದಂತೆ ನಾಶವಾಗಿವೆ. ಇಂತಹ ಕುತೂಃಲಕಾರಿ ಸಂಗತಿಗಳ ಮಾಹಿತಿ ಒಳಗೊಂಡ ಕೃತಿ ಇದು.

About the Author

ಜಿ.ಎಂ. ಕೃಷ್ಣಮೂರ್ತಿ

ಜಿ.ಎಂ. ಕೃಷ್ಣಮೂರ್ತಿ ಅವರು ಹಿರಿಯ ಲೇಖಕರು, ಅನುವಾದಕರು ಹಾಗೂ ವಿಮರ್ಶಕರು ಆಗಿದ್ದಾರೆ. ಮಹಾಭಾರತದ ಪ್ರಸಿದ್ಧ ಪಾತ್ರಗಳಾದ, ಪಿತಾಮಹ ಭೀಷ್ಮ, ಬಲ ಭೀಮಸೇನ, ಛಲಗಾರ ದುರ್‍ಯೋಧನ, ವೀರ ಅರ್ಜುನ, ಪಾಂಡವ ಪಟ್ಟಮಹಿಷಿ ದ್ರೌಪದಿ, ದಾನಶೂರ ಕರ್ಣ, ಸೂತ್ರಧಾರ ಶ್ರೀ ಕೃಷ್ಣ, ಶೋಕತಪ್ತ ತಾಯಿಕುಂತಿ, ಕುರುಡುದೊರೆ ಧೃತರಾಷ್ಟ್ರ, ಹಿರಿಯಪಾಂಡವ ಧರ್ಮರಾಯರ ಕುರಿತು ಸಾಹಿತ್ಯವನ್ನು ರಚಿಸಿದ್ದಾರೆ. ವಿಜ್ಞಾನ ವಿಚಾರಗಳ ಕುರಿತು ಲೇಖನಗಳನ್ನು ಬರೆದಿರುತ್ತಾರೆ. ಪ್ರಸ್ತುತ ಬೆಂಗಳೂರಿನ ರಾಜಾಜಿನಗರದಲ್ಲಿ ವಾಸವಿದ್ದಾರೆ. ಕೃತಿಗಳು: ಸ್ವಂತ ಉದ್ಯಮ ಆರಂಭಿಸುವುದು ಹೇಗೆ? ಭಗವಾನ ಬುದ್ಧ, ವಿಜ್ಞಾನ ವಿಶ್ವಕೋಶ, ಮಕ್ಕಳ ವಿಶ್ವ ಜ್ಞಾನ ಕೋಶ (ಸರಣಿಗಳು),  ಜನಪದ ಸಂಸ್ಕೃತಿಯ ಮಹಾ ...

READ MORE

Related Books