ಮರುಳ ಮುನಿಯನ ಕಗ್ಗ

Author : ಡಿ.ವಿ. ಗುಂಡಪ್ಪ (ಡಿ.ವಿ.ಜಿ.)

Pages 216

₹ 320.00




Year of Publication: 2015
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ಬೀದಿ, ಹುಬ್ಬಳ್ಳಿ- 580020

Synopsys

ಮರುಳ ಮುನಿಯನ ಕಗ್ಗ ಡಿ.ವಿ.ಜಿ. ಅವರ ಮಂಕುತಿಮ್ಮನ ಕಗ್ಗದ ಎರಡನೆಯ ಭಾಗವಾಗಿದೆ. ಡಿ.ವಿ.ಜಿ. ಅವರ ವಿಚಾರದ ಆಳ, ಎತ್ತರ, ಅಗಲ ಸೀಮಾತೀತ.  ಒಂದೊಂದು ಪದ್ಯವೂ ಒಂದು ಬೃಹತ್ ಪ್ರಬಂಧಕ್ಕೆ ವಿಷಯವನ್ನೊದಗಿಸುತ್ತದೆ. ಈ ಮರುಳ ಮುನಿಯನು ಮಂತ್ರದ್ರಷ್ಟಾರನಾದ ಮುನಿಗಿಂತ ಕಡಿಮೆಯವನಲ್ಲ. ಮಂಕುತಿಮ್ಮನ ತಮ್ಮನಾದರೂ ಅಣ್ಣನಿಗೆ ಸರಿದೊರೆಯಾಗಿ ನಿಲ್ಲುತ್ತಾನೆ. ಕೆಲವೆಡೆ ಅವನನ್ನೂ ಮೀರಿಸುತ್ತಾನೆ. 

 

About the Author

ಡಿ.ವಿ. ಗುಂಡಪ್ಪ (ಡಿ.ವಿ.ಜಿ.)
(17 March 1887 - 07 October 1975)

ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...

READ MORE

Related Books