ಮತದಾನ

Author : ಎಸ್.ಎಲ್. ಭೈರಪ್ಪ

Pages 171

₹ 165.00

Buy Now


Year of Publication: 1965
Published by: ಸಾಹಿತ್ಯ ಭಂಡಾರ
Address: ಶಾಪ್ ನಂ.8, ಜೆಎಂ ಲೇನ್, ಬಳೆಪೇಟೆ, ಬೆಂಗಳೂರು ಕರ್ನಾಟಕ 560053
Phone: 080 2287 7618

Synopsys

ಪ್ರಸಿದ್ಧ ಬರಹಗಾರ, ದಾರ್ಶನಿಕ, ಚಿಂತಕ ಎಸ್.ಎಲ್. ಭೈರಪ್ಪನವರು  ಬರೆದ ಕಾದಂಬರಿಮತದಾನ’.    

ಎಮ್.ಬಿ.ಬಿ.ಎಸ್. ಮಾಡಿದ ಒಬ್ಬ ತರುಣ ತನ್ನ ಹಳ್ಳಿಯಲ್ಲಿ ಗಾಂಧಿಯ ಮಾರ್ಗದಲ್ಲಿ ಸೇವೆ ಮಾಡತೊಡಗಿ ಜನಾದರಣೆ ಗಳಿಸುತ್ತಾನೆ. ಅವನ ಜನಾದರಣೆಯನ್ನು ಬಳಸಿಕೊಳ್ಳುವ ತಂತ್ರಹೂಡಿ ಆಳುವ ಪಕ್ಷವು ಇನ್ನೂ ಹೆಚ್ಚು ಸೇವೆ ಮಾಡುವ ಅವಕಾಶಗಳು ದೊರೆಯುತ್ತವೆಂಬ ಆಮಿಷ ಹೂಡಿ ಅವನನ್ನು ಚುನಾವಣೆಯಲ್ಲಿ ತನ್ನ ಪಕ್ಷದ ಅಭ್ಯರ್ಥಿಯನ್ನಾಗಿ ನಿಲ್ಲಿಸುತ್ತದೆ. ಚುನಾವಣಾ ಓಡಾಟದಲ್ಲಿ ತೊಡಗಿದ ಅವನು ಒಬ್ಬ ರೋಗಿಗೆ ಗಮನಕೊಡದೆ ರೋಗಿ ಸಾಯುತ್ತಾನೆ. ವ್ಯೆದ್ಯನು ಚುನಾವಣೆಯಲ್ಲಿ ಸೋಲುತ್ತಾನೆ. ಮಂತ್ರಿಗಳ ಚುನಾವಣಾ ಫಂಡಿಗೆ ತನ್ನ ಆದಾಯದಮಿತಿಮೀರಿ ಸಾಲಮಾಡಿ ಹಣ ಒದಗಿಸಿದ ಒಬ್ಬ ಕಿರು ಕಂಟ್ರಾಕ್ಟರು ಕೊನೆಗೆ ತಾನು ನಿರೀಕ್ಷಿಸಿದ ಕಂಟ್ರಾಕ್ಟು ಸಿಕ್ಕದೆ ಸಾಲ ತೀರಿಸಲಾರದೆ ದೊಡ್ಡಕೆರೆಯ ತೂಬಿಗೆ ಕಲ್ಲು ಕಟ್ಟಿಕೊಂಡು ಮುಳುಗಿ ಸಾಯುತ್ತಾನೆ. ಅವರ ಲಾಭಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಶಿವಪ್ಪವನ್ನು ಬಳಸಿಕೊಳ್ಳುವ ರಾಜಕೀಯ ಪ್ರಭಾವಶಾಲಿ ಜನರ ಸುತ್ತ ಕಥೆ ತಿರುಗುತ್ತದೆ.

ಕೃತಿಯು ಹಳ್ಳಿಯ ಸೊಗಡು, ಜನರ ಹಿತವನ್ನು ಬಯಸುವ ಡಾ:ಶಿವಪ್ಪ, ಅಧಿಕಾರದ ಅಭಿಲಾಷೆಯ ಸಾದರವಳ್ಳಿ, ಮಂತ್ರಿ, ಕಿರು ಕಂಟ್ರಾಕ್ಟರ್ ರಾಮಲಿಂಗೇಗೌಡರ ಸುತ್ತ ಗಿರಕಿ ಹೊಡೆಯುತ್ತಾ, ಮತದಾನದ ಪ್ರಧಾನ ಅಂಶವಿರುವ ಕೃತಿಯಿದು.ಜನರ ಹತ್ತಿರ ಹಣ ತೆಗೆದುಕೊಳ್ಳದೇ, ಔಷಧಿ ಕೊಟ್ಟು, ಜನಸೇವೆಯೇ ಜನಾರ್ಧನ ಸೇವೆ ಮಂತ್ರವೆಂದುಕೊಂಡಿದ್ದ ಡಾ:ಶಿವಪ್ಪನ ಜೀವನ ಯಾವ ಬಡವನ ಜೀವನಕ್ಕಿಂತ ಮಿಗಿಲಾದುದಲ್ಲ. ಅವನ ಹುಚ್ಚು ಜನಸೇವೆ ಅರಿಲಾರದ ತಾಯಿ, ಅಕ್ಕ ಮತ್ತು ಅವರ ಡಾಕ್ಟ್ರ ಬಗೆಗಿನ ಕಾಳಜಿ ಮತ್ತು ತಳಮಳಗಳು, ಕೃತಿಯ ಒಂದು ಗೋಡೆಯ ಆಧಾರ ಸ್ಥಂಬವಿದ್ದಂತೆ ಓದುಗರ ಮನಸ್ಸಿನಲ್ಲಿ ಉಳಿಯುತ್ತದೆ.

About the Author

ಎಸ್.ಎಲ್. ಭೈರಪ್ಪ
(20 August 1931)

ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...

READ MORE

Related Books