ಮೆಲು ತಂಗಾಳಿ

Author : ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)

₹ 180.00




Year of Publication: 2021
Published by: ವಸಂತ ಪ್ರಕಾಶನ
Address: # 360, 10ನೇ ಮುಖ್ಯ, ‘ಬಿ’ ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ಕ್ಲಬ್ ಎದುರು, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011
Phone: 080 2244 3996

Synopsys

ಖ್ಯಾತ ಕಾದಂಬರಿಕಾರ್ತಿ ಸಾಯಿಸುತೆ ಅವರ ಹೊಸ ಕಾದಂಬರಿ-ಮೆಲು ತಂಗಾಳಿ. ಇದು 150ನೇ ಕಾದಂಬರಿ ಎಂದು ಹೇಳಲಾಗುತ್ತಿದೆ. ಕಾದಂಬರಿಯ ವಿಷಯ ವಸ್ತು ಸಾಮಾಜಿಕವಾಗಿದ್ದು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)
(20 August 1942)

ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ.  ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು. ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ...

READ MORE

Related Books