ಮೆಲುದನಿ

Author : ಪುರುಷೋತ್ತಮ ಬಿಳಿಮಲೆ

₹ 200.00




Year of Publication: 2014
Published by: ಯಾಜಿ ಪ್ರಕಾಶನ
Address: ಭೂಮಿ, ಎಂ. ಪಿ. ಪ್ರಕಾಶ್‌ ನಗರ, ಹೊಸಪೇಟೆ- 583201
Phone: 9449922800

Synopsys

ಲೇಖಕ ಡಾ. ಪುರುಷೋತ್ತಮ ಬಿಳಿಮಲೆ ಅವರ ವಿಮರ್ಶಾ ಲೇಖನಗಳ ಕೃತಿ ʻಮೆಲುದನಿʼ. ಹಿರಿಯ-ಕಿರಿಯ ಬರಹಗಾರರು ಎಂಬ ಭೇದವಿಲ್ಲದೆ ಎಲ್ಲರನ್ನೂ ಓದುವ, ಓದಿದುರ ಬಗೆಗೆ ನಾಲ್ಕು ಮಾತು ಬರೆದು ಗುಣಾವಗುಣಗಳನ್ನು ನಿರ್ದಾಕ್ಷಿಣ್ಯವಾಗಿ ಹೇಳುವ ಪ್ರಾಮಾಣಿಕ ನಿಷ್ಠೆ ಇಲ್ಲಿನ ಲೇಖನಗಳಲ್ಲಿ ವ್ಯಕ್ತವಾಗುತ್ತದೆ. ಹಾಗೂ ಎಲ್ಲವನ್ನು ವಸ್ತುನಿಷ್ಠವಾಗಿ ಪರಿಗ್ರಹಿಸುವ ದೃಷ್ಟಿಕೋನವೊಂದು ಇಲ್ಲಿ ಗಮನಸೆಳೆಯುತ್ತದೆ.

About the Author

ಪುರುಷೋತ್ತಮ ಬಿಳಿಮಲೆ
(21 August 1955)

ಡಾ.ಪುರುಷೋತ್ತಮ ಬಿಳಿಮಲೆ ಅವರು ಜನಿಸಿದ್ದು 1955 ಆಗಸ್ಟ್‌ 21ರಂದು. ನವದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿರುವ ಡಾ.ಪುರುಷೋತ್ತಮ ಬಿಳಿಮಲೆಯವರು ಬಂಡಾಯ-ದಲಿತ ಸಾಹಿತ್ಯ ಚಳುವಳಿಯಲ್ಲಿ ನೇರವಾಗಿ ಭಾಗವಹಿಸಿದವರು, ಜನಪರ ಹೋರಾಟಗಳನ್ನು ಸಂಘಟಿಸಿದವರು. ಬಡವರ, ಹಿಂದುಳಿದವರ , ಅಲ್ಪಸಂಖ್ಯಾತರ ಮತ್ತು ದಲಿತರ ಪರವಾಗಿ ನಿರಂತರವಾಗಿ ಬರೆಯುತ್ತಲೇ ಬಂದಿರುವ ಅವರು ಸಾಹಿತ್ಯವನ್ನು ತಮ್ಮ ಹೋರಾಟಗಳಿಗೆ ಪೂರಕವಾಗಿ ಬಳಸಿಕೊಂಡಿದ್ದಾರೆ. ಜನಪದ ಸಾಹಿತ್ಯವನ್ನು ಗಂಭೀರವಾಗಿ ಅಭ್ಯಸಿಸಿರುವ ಅವರು ಆ ಮೂಲಕ ಶಿಷ್ಟ ಸಾಹಿತ್ಯದ ಕೆಲವು ಜನವಿರೋಧಿ ನೆಲೆಗಳನ್ನು ಗಂಭೀರವಾಗಿ ಪ್ರಶ್ನಿಸಿದ್ದಾರೆ. 1955ರಲ್ಲಿ ಸುಳ್ಯ ತಾಲೂಕಿನ ಪಂಜದಲ್ಲಿ ಹುಟ್ಟಿದ ಇವರು ಪುತ್ತೂರು, ಮದರಾಸು, ಮಂಗಳೂರುಗಳಲ್ಲಿ ...

READ MORE

Related Books