ಮೊದಲ ಸಹಸ್ರಮಾನದ ಕನ್ನಡ ಶಾಸನಗಳು ಸಂಪುಟ-2

Author : ಷ. ಶೆಟ್ಟರ್‌

Pages 572

₹ 320.00




Year of Publication: 2022
Published by: ಅಭಿನವ ಪ್ರಕಾಶನ
Address: 17/18-2, 1ನೇ ಮುಖ್ಯರಸ್ತೆ, ಮಾರೆನಹಳ್ಳಿ, ವಿಜಯನಗರ, ಬೆಂಗಳೂರು- 560040
Phone: 9448804905

Synopsys

‘ಮೊದಲ ಸಹಸ್ರಮಾನದ ಕನ್ನಡ ಶಾಸನಗಳು ಸಂಪುಟ-2’ ಕೃತಿಯು ಷ. ಶೆಟ್ಟರ್ ಅವರ 2020- ಹಳಗನ್ನಡ ಶಾಸನಗಳ ಸಮಗ್ರ ಅಧ್ಯಯನ (ಸಾ.ಶ.ಸು 780-885) ಕೃತಿಯಾಗಿದೆ. ಕೃತಿಯಲ್ಲಿನ ಕೆಲವೊಂದು ವಿಚಾರಗಳು ಹೀಗಿವೆ : 19ನೇ ಶತಮಾನದ ಕೊನೆಯ ದಶಕದಿಂದ ಈವರೆಗೂ ಪ್ರಕಟವಾಗಿರುವ ಹಳಗನ್ನಡ ಶಾಸನಗಳೆಲ್ಲವನ್ನೂ ಸಂಗ್ರಹಿಸಿ ಮತ್ತೊಂದು ವಿಧಾನದಲ್ಲಿ ಸಂಪಾದಿಸುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. ಆರಂಭ ಕಾಲದ ಕದಂಬರು, ಕೊಲಾಳ ಹಾಗೂ ತಲಕಾಡಿನ ಗಂಗರು, ಬಾದಾಮಿ ಚಾಲುಕ್ಯರು ಮತ್ತು ಮಾನ್ಯಖೇಟದ ರಾಷ್ಟ್ರಕೂಟರಲ್ಲದೆ ಇವರ ಸಾಮಂತರೂ ಸಮಕಾಲೀನರೂ ಕ್ರಿ.ಶ. ಸು. 4 ರಿಂದ 10ನೇ ಶತಮಾನದವರೆಗೆ ಬರೆಸಿದ ಶಾಸನಗಳ ಲಿಪಿ ಮತ್ತು ಭಾಷೆಯನ್ನು ಈ ಹಳಗನ್ನಡ ಪದವು ಪ್ರತಿನಿಧಿಸುವುದು. ಒಂದು ಜನಾಂಗದ ಭಾಷೆಯಾಗಿ ನಾಲ್ಕನೆಯ ಶತಮಾನಕ್ಕಿಂತ ಬಹುಕಾಲ ಮುಂಚೆಯೇ ಹಳಗನ್ನಡವು  ಪ್ರಚಾರದಲ್ಲಿತ್ತು. ಆದರೆ ಅದನ್ನು ಬರೆಯಲು ವಿಶಿಷ್ಟ ಲಿಪಿ ಇರಲಿಲ್ಲ. ಇದಕ್ಕಿಂತ ಪೂರ್ವದ ಇಲ್ಲಿಯ ಬರಹಗಳೆಲ್ಲವೂ ಮೌರ್ಯ ಆರಸ ಅಶೋಕನು ಕ್ರಿ.ಪೂ. ಮೂರನೆಯ ಶತಮಾನದಲ್ಲಿ ಪರಿಚಯಿಸಿದ ಬ್ರಾಹೀಲಿಪಿ ಮತ್ತು ಪ್ರಾಕೃತ ಭಾಷೆಗಳಲ್ಲಿದ್ದವು. ಕ್ರಿ.ಶ. ಮೂರನೆಯ ಶತಮಾನದಲ್ಲಿ ಸಂಸ್ಕೃತ ಭಾಷೆಯು ಕೆಳದಣವನ್ನು ಪ್ರವೇಶಿಸಿ, ಪ್ರಾಕೃತದಂತೆ ಶಾಸನ ಭಾಷೆಯಾಗತೊಡಗಿತು. ಆದರೆ ಇದಕ್ಕೂ ತನ್ನದಾದ ಲಿಪಿ ಇರದ ಕಾರಣ ಈ ಭಾಷಾ ಬರಹಗಳೆಲ್ಲವೂ ಆರಂಭದಲ್ಲಿ ಬ್ರಾಹ್ಮೀಲಿಪಿಯನ್ನು ಆನಂತರ ಕಾಲದಲ್ಲಿ ದಕ್ಷಿಣದ ಲಿಪಿಗಳನ್ನು, ಅವಲಂಬಿಸಬೇಕಾಯಿತು. ಕ್ರಿ.ಶ 8ನೇ ಶತಮಾನದವರೆಗೂ ಇಲ್ಲಿ ಬರೆಸಿದ ಸಂಸ್ಕೃತ ಶಾಸನಗಳೆಲ್ಲವೂ ಹಳಗನ್ನಡ ಲಿಪಿಯಲ್ಲಿವೆ. ಈ ಶತಮಾನದಲ್ಲಿ ನಾಗರೀಕ ಲಿಪಿಯು ಪ್ರವೇಶ ಮಾಡಿ ಸಂಸ್ಕೃತ ಭಾಷಾಬರಹಗಳನ್ನು ಹಂಚಿಕೊಳ್ಳಲಾರಂಭಿಸಿತು. ಆದರೂ, ಇಲ್ಲಿಯ ಬಹುತೇಕ ಸಂಸ್ಕೃತ ಶಾಸನಗಳನ್ನು ಶತಮಾನಗಳುದ್ದಕ್ಕೂ ಬರೆಸಿದ್ದು ಕನ್ನಡ ಲಿಪಿಗಳಲ್ಲಿಯೇ. ಇಂದಿನ ಕರ್ನಾಟಕ ರಾಜ್ಯದಲ್ಲಿ ಮೊದಲ ಸಹಸ್ರಮಾನದಲ್ಲಿ ಬರೆಸಿದ ಹಳಗನ್ನಡ ಶಾಸನಗಳ ಸಂಖ್ಯಾ ಪ್ರಮಾಣವನ್ನಿನ್ನೂ ಇತ್ಯರ್ಥಗೊಳಿಸಬೇಕಾಗಿದೆ, ಆದರೆ ಇವುಗಳಲ್ಲಿ ಹೆಚ್ಚಿನವು ಕನ್ನಡ ಲಿಪಿ ಮತ್ತು ಭಾಷೆಯಲ್ಲಿದ್ದವೆಂಬುದರ ಬಗ್ಗೆ ಸಂಶಯವಿಲ್ಲ. ಬ್ರಾಹೀಲಿಪಿ ಮತ್ತು ಪ್ರಾಕೃತ ನುಡಿಗಟ್ಟುಗಳು ಮಾತ್ರ ಶಾಸನ ಮಾಧ್ಯಮಗಳಾಗಿದ್ದ ಕ್ರಿ.ಪೂ. ಮೂರನೆಯ ಶತಮಾನದಿಂದ ಕ್ರಿ.ಶ. ಮೂರನೆಯ ಶತಮಾನದ ಕಾಲಾವಧಿಯಲ್ಲಿ ಇಲ್ಲಿ ಬರೆಸಿದ ಸುಮಾರು 400 ಶಿಲಾಶಾಸನಗಳು ಈಗ ಉಳಿದುಕೊಂಡಿವೆ. ನಾಲ್ಕನೆಯ ಶತಮಾನದಿಂದ 10ನೆಯ ಶತಮಾನದಕೊನೆಯವರೆಗೆ ಸಂಸ್ಕೃತ ಭಾಷೆ ಮತ್ತು ಹಳಗನ್ನಡ ಲಿಪಿಯಲ್ಲಿ (ಇಲ್ಲವೇ ಕನ್ನಡ ಮತ್ತು ಸಂಸ್ಕೃತ ದ್ವಿಭಾಷೆಗಳಲ್ಲಿ) ಬರೆಸಿದ ತಾಮ್ರಪಟ ಮತ್ತು ಶಿಲಾ ಶಾಸನಗಳಲ್ಲಿ ಸುಮಾರು 500 ಉಳಿದುಕೊಂಡಿವೆ. ಸರಿಸುಮಾರು ಇದೇ ಕಾಲಾವಧಿಯಲ್ಲಿ ಹಳಗನ್ನಡ ಲಿಪಿ ಮತ್ತು ಭಾಷೆಯಲ್ಲಿ ಬರೆಸಿದ 2000 ಹೆಚ್ಚು ಸಂಖ್ಯೆಯ ಶಿಲಾಶಾಸನಗಳೂ ತಾಮ್ರಪಟಗಳೂ ಈವರೆಗೂ ಲಭ್ಯವಾಗಿವೆ. 2000 ಹಳಗನ್ನಡ ಶಾಸನಗಳನ್ನು ಮತ್ತೊಮ್ಮೆ ಸಂಪಾದಿಸಿ ಪ್ರಕಟಿಸುವುದು, ಈ ಅಧ್ಯಯನದ ಉದ್ದೇಶವಾಗಿದೆ.

About the Author

ಷ. ಶೆಟ್ಟರ್‌
(11 December 1935)

ಷ.ಶೆಟ್ಟರ್ ಅವರು ಹುಟ್ಟಿದ್ದು 11 ಡಿಸೆಂಬರ್ 1935 ರಂದು. ಊರು ಬಳ್ಳಾರಿ ಜಿಲ್ಲೆಯ ಹಂಪಸಾಗರ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್ ಗಳಲ್ಲಿ ಉನ್ನತ ವ್ಯಾಸಂಗ, ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕುರಿತು 27ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳ ಪ್ರಕಟಣೆ. ವಿವಿಧ ವಿಶ್ವವಿದ್ಯಾಲಯದಲ್ಲಿ ಬೋಧನೆ. 1960 -96, ಭಾರತೀಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕತ್ವ 1978-95, ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ ಅಧ್ಯಕ್ಷ ಸ್ಥಾನ-1996-99, ಬೆಂಗಳೂರಿನ ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಅಡ್ವಾನ್ಸಡ್ ಸ್ಟಡೀಸ್ ನಲ್ಲಿ ಡಾ.ಎಸ್.ರಾಧಾಕೃಷ್ಣನ್ ಪ್ರಾಧ್ಯಾಪಕತ್ವ 2002-2010, ...

READ MORE

Related Books