ಮೋದಿ ಮೋಡಿ

Author : ಪ್ರೇಮಶೇಖರ

Pages 190

₹ 190.00




Year of Publication: 2019
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-560020

Synopsys

ರಾಜಕೀಯ ವಿಶ್ಲೇಷಕ ಪ್ರೇಮಶೇಖರ ಅವರ ಕೃತಿ-ಮೋದಿ ಮೋಡಿ. ಅಂತಾರಾಷ್ಟ್ರೀಯ ವಿದ್ಯಮಾನಗಳನ್ನು ಕುರಿತು ಪತ್ರಿಕೆಗಳಲ್ಲಿ ಅಂಕಣ ಮೂಲಕ ಬರೆದ ಬರಹಗಳಿವು. ಅಂತಾರಾಷ್ಟ್ರೀಯ ವಿದ್ಯಮಾನಗಳು ಮೇಲ್ನೋಟಕ್ಕೆ ಕಾಣುವ ಹಾಗೂ ಅಂತರ್ಗತ ಉದ್ದೇಶಗಳು, ಮುಂದೆ ಸಂಭವಿಸಬಹುದಾದ ಪರಿಣಾಮಗಳು ಇತ್ಯಾದಿ ಕುರಿತು ತಮ್ಮ ಒಳನೋಟದ ಕ್ಷ-ಕಿರಣ ಬೀರಿ ಬರೆದ ಬರಹಗಳನ್ನು ಇಲ್ಲಿ ಸಂಕಲಿಸಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೋದಿ ಅವರ ವ್ಯಕ್ತಿತ್ವ ಹಾಗೂ ರಾಜಕಾರಣಿಯಾಗಿ ಅವರು ಬೀರಿದ ಪ್ರಭಾವ ಇತ್ಯಾದಿಗಳು ಕೆಲ ಬರಹಗಳಲ್ಲಿ ವಿಶ್ಲೇಷಿಸಲಾಗಿದೆ.

About the Author

ಪ್ರೇಮಶೇಖರ
(22 June 1960)

ಹೊರನಾಡ ಕನ್ನಡಿಗ ಪ್ರೇಮಶೇಖರ ಪಠ್ಯವಿಷಯಗಳ ಬಗ್ಗೆ ಇಂಗ್ಲೀಷಿನಲ್ಲಿ ಸಂಶೋಧನಾ ಲೇಖನಗಳನ್ನು ಹಾಗೂ ಕನ್ನಡದಲ್ಲಿ ಕಥೆಕಾದಂಬರಿಗಳನ್ನು ಬರೆಯುವುದರ ಮೂಲಕ ಬರವಣಿಗೆಯನ್ನಾರಂಭಿಸಿದವರು.. ಹುಟ್ಟಿದ್ದು 1960 ಜೂನ್ 22 ಕೊಳ್ಳೇಗಾಲದಲ್ಲಿ. ದೆಹಲಿಯಲ್ಲಿ ವಿದ್ಯಾಭ್ಯಾಸ ಮಾಡಿ, ಇಪ್ಪತ್ತೆರಡು ವರ್ಷಗಳ ಸುಧೀರ್ಘ ಕಾಲ ಪಾಂಡಿಚೆರಿ ವಿಶ್ವವಿದ್ಯಾಲಯದಲ್ಲಿ ಭಾರತದ ವಿದೇಶಾಂಗ ನೀತಿಯನ್ನು ಬೋಧಿಸಿ 2012ರಲ್ಲಿ ಸ್ವಯಂನಿವತಿ ಪಡೆದುಕೊಂಡಿದ್ದಾರೆ. ಪತ್ರಿಕಾರಂಗದಲ್ಲಿರುವ ಹಿತೈಷಿಗಳ ಬಯಕೆಯಂತೆ ಅಂತರರಾಷ್ಟ್ರೀಯ ಸಂಬಂಧಗಳ ಬಗ್ಗೆ ಕನ್ನಡದಲ್ಲಿ ಐನೂರರಷ್ಟು ಲೇಖನಗಳನ್ನು ಬರೆದಿದ್ದಾರೆ. ಇದುವರೆಗೆ ಎರಡು ಕಾದಂಬರಿಗಳನ್ನೂ, ಹತ್ತು ಕಥಾ ಸಂಕಲನಗಳನ್ನೂ, ಹನ್ನೊಂದು ಲೇಖನ ಸಂಕಲನಗಳನ್ನೂ ಪ್ರಕಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸಾಹಿತ್ಯಾಸಕ್ತರಿಗೆ ಕಥಾರಚನೆಯಲ್ಲಿ ತರಬೇತಿ ನೀಡುವ ಕಾರ್ಯಾಗಾರಗಳನ್ನು ...

READ MORE

Related Books