ಮುಡಿ

Author : ಪ್ರಭಾಕರ ಜೋಶಿ

Pages 180

₹ 125.00




Year of Publication: 2006
Published by: ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ
Address: ಎಂ.ಜಿ.ಎಂ. ಕಾಲೇಜು, ಉಡುಪಿ - 576102

Synopsys

ಲೇಖಕ ಡಾ. ಎಂ. ಪ್ರಭಾಕರ ಜೋಶಿ ಅವರ ವಿಮರ್ಶಾ ಕೃತಿ ʻಮುಡಿʼ. ಪುಸ್ತಕದ ಮುನ್ನುಡಿಯಲ್ಲಿ ಸಾಹಿತಿ ಡಾ. ಪುರುಷೋತ್ತಮ ಬಿಳಿಮಲೆ ಅವರು, “ಯಕ್ಷಗಾನ ಕಲೆಯನ್ನು ಭಾಷೆಯಲ್ಲಿ ವಿವರಿಸುವ ಪ್ರಯತ್ನಗಳು ಮತ್ತೆ ಮತ್ತೆ ನಡೆಯುತ್ತಲೇ ಇವೆ. ಇಂಥ ಪ್ರಯತ್ನಗಳ ಮುಂಚೂಣಿಯಲ್ಲಿ ಇರುವವರು ಡಾ. ಎಂ. ಪ್ರಭಾಕರ ಜೋಶಿ ಅವರು. `ಕೃಷ್ಣ ಸ೦ಧಾನ'ದ೦ತಹ ಅನನ್ಯ ಪ್ರಸ೦ಗವೊ೦ದರ ಸೂಕ್ಷ್ಮ ಅಧ್ಯಯನ ನಡೆಸಿದ ಅವರು ಕೇದಗೆ, ಜಾಗರ, ಮಾರುಮಾಲೆ, ವಾಗರ್ಥ, ಯಕ್ಷಗಾನ ಪದಕೋಶದಂಥ ಮಹತ್ವದ ಕೃತಿಗಳ ಮೂಲಕ ಯಕ್ಷಗಾನದ ಬಗೆಗೂ ನಮ್ಮ ಅರಿವನ್ನು ಹೆಚ್ಚಿಸಿದ್ದಾರೆ. ಮಾತ್ರವಲ್ಲ, ಯಕ್ಷಗಾನದ ಕುರಿತಾದ ಬರಹಗಳು ಹೇಗಿರಬೇಕು ಎಂಬ ಕುರಿತು ಒಂದು ರೀತಿಯ ಚೌಕಟ್ಟನ್ನೂ ಬರಹಗಾರರಿಗೆ ಒದಗಿಸಿದ್ದಾರೆ. ಯಕ್ಷಗಾನದ ಭಾಷೆಯ ಕುರಿತಾದ ಮುಖ್ಯ ಚರ್ಚೆಗಳನ್ನು ಯಕ್ಷಗಾನ ಕಲಾಭಾಷೆ, ಕಲೆ, ಸ್ವತ್ವ ಮತ್ತು ಸತ್ತ್ವ, ಒಡ್ಡೋಲಗ ವೈಭವ, ಪ್ರಸಂಗ ಮತ್ತು ಅರ್ಥ ಹಾಗೂ ಯಕ್ಷಗಾನೋಚಿತ ಶೈಲಿ ಮತ್ತು ಮುಕ್ತತೆ - ಈ ಲೇಖನಗಳಲ್ಲಿ ನಾವು ವಿಶೇಷವಾಗಿ ಕಾಣಬಹುದು. ಈ ಲೇಖಗಳಲ್ಲಿ ಡಾ. ಜೋಶಿಯವರು ಯಕ್ಷಗಾನದ ಅನನ್ಯತೆಯನ್ನು ಒಪ್ಪಿಕೊಂಡು ಅದನ್ನು ಸ್ಥಾಪಿಸುತ್ತಾರೆ” ಎಂದು ಹೇಳಿದ್ದಾರೆ.

About the Author

ಪ್ರಭಾಕರ ಜೋಶಿ
(28 April 1965)

.ಪ್ರಭಾಕರ ಜೋಶಿ ಅವರು ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನವರು. ಪತ್ರಕರ್ತರು. ಸದ್ಯ, ಕಲಬುರಗಿ ರಂಗಾಯಣದ ನಿರ್ದೇಶಕರು. ಕವಿ ರವೀಂದ್ರ ಕರ್ಜಗಿ ಅವರ ಸಮಗ್ರ ಕಾವ್ಯ ’ಅನ್ವಯ ಕಾವ್ಯ’ ಸಂಪಾದಿಸಿದ್ದಾರೆ. ರಂಗ ಚಟುವಟಿಕೆಯಲ್ಲಿ ತೀವ್ರ ತೊಡಗಿಸಿಕೊಂಡಿದ್ದು, ಹಲವು ಕೃತಿಗಳನ್ನು ಪ್ರಕಾಶಿಸಿದ್ದಾರೆ.  ...

READ MORE

Related Books