ಗೆದ್ದಲು ಹುಳುವಿಗೆ ಬಿದ್ದ ಮರದ ಕನಸು

Author : ಮೂಡ್ನಾಕೂಡು ಚಿನ್ನಸ್ವಾಮಿ

Pages 474

₹ 450.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಹಿರಿಯ ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಅವರ ಕವಿತೆಗಳ ಸಂಗ್ರಹವಾಗಿದೆ ಈ ಕೃತಿ. ಇವರ ಕವಿತೆಗಳು ಸಮಾನತೆಯನ್ನು ಆಶಿಸುವ ಮನಸ್ಸಿನ ಆಶಯರೂಪದ ನುಡಿ ದೀವಿಗೆಗಳಂತಿದೆ. ಮುಟ್ಟಿಸಿಕೊಳ್ಳಲಾಗದ ಹುಟ್ಟಿನ ಮೂಲದಿಂದ ಬಂದ ಕವಿ ಮನಸ್ಸು ನೊಂದ ನೋವಿನ ಎದೆಯಾಳದ ಮಾತುಗಳಾಗಿ ಇಲ್ಲಿ ನೋವನ್ನು ನಿವೇದಿಸುವ ಜೊತೆಗೆಯೇ ಸಮಾನತೆಯನ್ನೂ ಆಶಿಸಿದೆ. ಪ್ರತಿ ಕವಿತೆಗಳ ಆಂತರ್ಯದಲ್ಲಿ ಈ ಬಗೆಯ ತಣ್ಣನೆಯ ಮಾತುಗಳು ಕೇಳುತ್ತೇವೆ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ಹಲವು ಕವಿತೆಗಳನ್ನು ಈ ಕೃತಿಯು ಒಳಗೊಂಡಿದೆ.

About the Author

ಮೂಡ್ನಾಕೂಡು ಚಿನ್ನಸ್ವಾಮಿ
(22 September 1954)

ದಲಿತ-ಬಂಡಾಯ ಸಾಹಿತ್ಯ ಚಳವಳಿಯ ಸತ್ವಪೂರ್ಣ ದನಿಯಾಗಿರುವ ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮೂಲತಃ ಗಡಿನಾಡಾದ ಚಾಮರಾಜನಗರದವರು. ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾದ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರಲ್ಲದೆ, ನಿರ್ದೇಶಕರು(ಹಣಕಾಸು) ಹಾಗೂ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿ ಮಾರ್ಚ್ 2012ರಲ್ಲಿ ನಿವೃತ್ತಿ ಹೊಂದಿದ್ದಾರೆ. ಜೊತೆಗೆ ಏಪ್ರಿಲ್ 2015 ರಿಂದ ಮಾರ್ಚ್ 2017 ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. 2016-17 ರ ಸಾಲಿಗೆ ಮೈಸೂರು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ...

READ MORE

Related Books