ಮುಖಾಂತರ

Author : ನಾ. ಮೊಗಸಾಲೆ

Pages 646

₹ 495.00




Year of Publication: 2014
Published by: ಮನೋಹರ ಗ್ರಂಥ ಮಾಲಾ
Address: ಧಾರವಾಡ

Synopsys

ಮುಖಾಂತರ- ಲೇಖಕ ನಾ. ಮೊಗಸಾಲೆ ಅವರ ಕಾದಂಬರಿ. ದಟ್ಟ ಜೀವನಾನುಭವದ ಹೆಣಿಗೆಯಲ್ಲಿ ಕುಟುಂಬವೊಂದರ ಕಥೆ ಸಿದ್ಧವಾಗಿದೆ. ನಾಡಿನ ಜಗತ್ತಿನ ವಿದ್ಯಮಾನಗಳನ್ನು ಹಾಸುಹೊಕ್ಕಾಗಿ ಲೇಖಕರು ಸೇರಿಸಿದ್ದಾರೆ. ಸ್ಥಳೀಯ ಸತ್ವವನ್ನು ಒಳಗೊಳ್ಳುತ್ತಲೇ ಜಾಗತಿಕ ಆಗುಹೋಗುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಕಾದಂಬರಿಯ ವಸ್ತು ವಿಸ್ತಾರ ಪಡೆದುಕೊಳ್ಳುತ್ತದೆ. ಸಂಬಂಧಗಳ ಜಟಿಲತೆ, ಸ್ತ್ರೀ ಜಗತ್ತಿನ ತಲ್ಲಣಗಳು, ಆಸ್ತಿ ಅಧಿಕಾರದ ದರ್ಪ, ಅಂತಃಕರಣ ಜಗತ್ತಿನ ಆರ್ದ್ರತೆ. ಜಾಗತೀಕರಣದ ಕಬಂಧ ಬಾಹು, ಆಕಸ್ಮಿಕಗಳು ಬದುಕನ್ನು ರೂಪಿಸುವ ವಿಸ್ಮಯ, ವರ್ಗಸಂಘರ್ಷ ಅನಿಯಂತ್ರಿತ ಆಕರ್ಷಣೆಯ ಸ್ವರೂಪ. ಈ ಎಲ್ಲವನ್ನೂ ಮೀರಿದ ನಿರ್ಲಿಪ್ತತೆ ಹೀಗೆ ಹಲವು ನೆಲೆಗಳನ್ನು ಒಳಗೊಂಡಿದೆ.

About the Author

ನಾ. ಮೊಗಸಾಲೆ
(27 August 1944)

ಕಾಸರಗೋಡು ತಾಲೂಕಿನ ಕೋಳ್ಯೂರಿನ ಮೊಗಸಾಲೆ ಎಂಬ ಗ್ರಾಮದಲ್ಲಿ ಜನಿಸಿದ ಡಾ. ನಾರಾಯಣ ಮೊಗಸಾಲೆ ವೃತ್ತಿಯಲ್ಲಿ ಆಯುರ್ವೇದ ವೈದ್ಯರು. ಕಾವ್ಯದ ಜೊತೆಗೆ ಕಥೆ ಕಾದಂಬರಿಗಳನ್ನು ರಚಿಸಿರುವ ಅವರು ಸಾಹಿತ್ಯ ಸೃಷ್ಟಿಯ ಜೊತೆಗೆ ಸಾಹಿತ್ಯ ಪ್ರಸಾರದಲ್ಲಿಯೂ ವಿಶೇಷ ಕೆಲಸ ಮಾಡಿದ್ದಾರೆ. ಕಾಂತಾವರ  ಎಂಬ ಪುಟ್ಟಗ್ರಾಮದಲ್ಲಿ ಕನ್ನಡ ಸಂಘ ಕಟ್ಟಿ ನಿರಂತರ ಸಾಹಿತ್ಯಕ ಚಟುವಟಿಕೆ ನಡೆಸುತ್ತಿದ್ದಾರೆ. ವರ್ತಮಾನದ ಮುಖಗಳು, ಪಲ್ಲವಿ, ಮೊಗಸಾಲೆಯ ನೆನಪುಗಳು, ಪ್ರಭವ, ಸ್ವಂತಕ್ಕೆ ಸ್ವಂತಾವತಾರ, ನೆಲದ ನೆರಳು, ಇದಲ್ಲ, ಇದಲ್ಲ, ಇಹಪರದ ಕೊಳ, ಕಾಮನ ಬೆಡಗು, ದೇವರು ಮತ್ತೆ ಮತ್ತೆ (ಕವನ ಸಂಕಲನಗಳು), ಅರುವತ್ತರ ತೇರು, ಪೂರ್ವೋತ್ತರ, ಕರಣ ಕಾರಣ (ಸಮಗ್ರ ಕಾವ್ಯ), ಮಣ್ಣಿನ ...

READ MORE

Related Books