ನಾಗೇಶ್ ಹೆಗಡೆ ಅವರ ಆಯ್ದ ಬರಹಗಳು

Author : ನಾಗೇಶ ಹೆಗಡೆ

Pages 108

₹ 75.00




Year of Publication: 2009
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ವೈಜ್ಞಾನಿಕ ಲೇಖನಗಳ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾದವರು ನಾಗೇಶ ಹೆಗಡೆ. ಪತ್ರಕರ್ತರಾಗಿ ಅಪರೂಪದ ಮತ್ತು ಮಹತ್ವದ ಕೆಲಸ ಮಾಡಿರುವ ನಾಗೇಶ ಹೆಗಡೆ ಅವರು ಕನ್ನಡದಲ್ಲಿ ಬರೆಯುವ ವಿಜ್ಞಾನ ಲೇಖಕರು. ವೈಜ್ಞಾನಿಕ ಚಿಂತನೆ-ಪರಿಸರದ ಬಗೆಗಿನ ಕಾಳಜಿ ಅವರ ಬರಹಗಳ ವಿಶೇಷ. ನಾಗೇಶ ಹೆಗಡೆ ಅವರು ಬರೆದ ಆಯ್ದ ಬರಹಗಳನ್ನು ಈ ಸಂಕಲನ ಒಳಗೊಂಡಿದೆ.

About the Author

ನಾಗೇಶ ಹೆಗಡೆ
(14 February 1948)

ಕನ್ನಡದ ಪ್ರಮುಖ ಲೇಖಕರಲ್ಲೊಬ್ಬರಾದ ನಾಗೇಶ ಹೆಗಡೆ ಅವರ ಹುಟ್ಟೂರು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬಕ್ಕಮನೆ. ಮಾಧ್ಯಮಿಕ ಶಿಕ್ಷಣವನ್ನು ಯಡಳ್ಳಿಯ ವಿದ್ಯೋದಯ ಹೈಸ್ಕೂಲಿನಲ್ಲಿ ಪೂರೈಸಿದ ಅವರು ಶಿರಸಿಯ ಮೋಟಿನಸರ ಸ್ಮಾರಕ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭೂವಿಜ್ಞಾನದಲ್ಲಿ ಬಿಎಸ್‍ಸಿ ಮುಗಿಸಿದರು. ಖರಗಪುರ ಐಐಟಿಯಲ್ಲಿ ಆನ್ವಯಿಕ ಭೂವಿಜ್ಞಾನದಲ್ಲಿ ಎಂಎಸ್‍ಸಿ (ಟೆಕ್) ಮಾಡಿದರು. ದೆಹಲಿಯ ಜವಾಹರಲಾಲ ನೆಹರು ವಿಶ್ವವಿದ್ಯಾಲಯದಲ್ಲಿ ಪರಿಸರ ವಿಜ್ಞಾನದಲ್ಲಿ ಎಂ.ಫಿಲ್ ಮಾಡಿದರು. ಶಿಕ್ಷಕ, ಪರಿಸರವಾದಿ ಹಾಗೂ ಪತ್ರಕರ್ತರಾಗಿ ವಿಭಿನ್ನ ಪಾತ್ರಗಳನ್ನು ವಹಿಸುತ್ತಿರುವ ನಾಗೇಶ ಹೆಗಡೆ ಸುಧಾ ವಾರಪತ್ರಿಕೆಯ ಸಹಾಯಕ ಸಂಪಾದಕರಾಗಿದ್ದರು. ಕನ್ನಡದಲ್ಲಿ ವಿಜ್ಞಾನ-ತಂತ್ರಜ್ಞಾನದ ಲೇಖನಗಳನ್ನು ಬರೆದಿರುವ ...

READ MORE

Related Books