ನಕ್ರ ಹಾಗೂ ನಾನು

Author : ಹಾಡ್ಲಹಳ್ಳಿ ನಾಗರಾಜ್

Pages 98

₹ 9.00
Year of Publication: 1982
Published by: ಭವಾನಿ ಪ್ರಕಾಶನ
Address: ಮಡಿಕೇರಿ

Synopsys

‘ನಕ್ರ ಹಾಗೂ ನಾನು’ ಲೇಖಕ ಹಾಡ್ಲಹಳ್ಳಿ ನಾಗರಾಜ್ ಅವರ ಎರಡನೇ ಕಥಾ ಸಂಕಲನ ಈ ಸಂಕಲನದಲ್ಲಿ ಸಂಯುಕ್ತ ಕರ್ನಾಟಕ, ಶಕ್ತಿ, ಹಾಗೂ ಪರಾಕ್ರಮ ಪತ್ರಿಕೆಗಳಲ್ಲಿ ಪ್ರಕಟವಾದ ಕತೆಗಳು ಸಂಕಲನಗೊಂಡಿವೆ. ತಮ್ಮ ಗ್ರಾಮ್ಯ ಭಾಷೆಯಿಂದ, ಕಳಿತ ಅನುಭವಗಳಿಂದ ಕತೆಗಳಲ್ಲಿ ಹೊಸತನವನ್ನು ತರುವ ನಾಗರಾಜ್ ಅವರ ಈ ಸಂಕಲನವೂ ವಿಭಿನ್ನ ಕತೆಗಳನ್ನು ಒಳಗೊಂಡಿದೆ. ಇಲ್ಲಿನ ಕತೆಗಳನ್ನು ತಾವಾಗೆ ಓದಿಸಿಕೊಳ್ಳುತ್ತವೆ.

About the Author

ಹಾಡ್ಲಹಳ್ಳಿ ನಾಗರಾಜ್

ಹಾಡ್ಲಹಳ್ಳಿ ನಾಗರಾಜು ಅವರು ಮೂಲತಃ ಹಾಸನಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹಾಡ್ಲಹಳ್ಳಿ ಗ್ರಾಮದವರು. ತಂದೆ- ಗುರುಶಾಂತೇಗೌಡರು, ತಾಯಿ- ಪುಟ್ಟಮ್ಮ. ಕಡುಬಡತನದ ರೈತಾಪಿ ಕುಟುಂಬದಲ್ಲಿ ಜನಿಸಿದ ಅವರು ಬಿ.ಎಸ್ಸಿ ಪದವೀಧರರಾಗಿದ್ದು, ಎನ್.ಸಿ.ಸಿ ಇಲಾಖೆಯಲ್ಲಿ 36 ವರ್ಷಗಳ ಕಾಲ ಸೇವೆಸಲ್ಲಿಸಿದ್ದಾರೆ. ಅಲ್ಲದೇ ಅವರ ಕಾರ್ಯವೈಖರಿಯಿಂದಾಗಿ ಮುಖ್ಯಮಂತ್ರಿಗಳ ಶ್ಲಾಘನಾಪತ್ರಕ್ಕೆ ಪಾತ್ರರಾಗಿದ್ದಾರೆ. ಎನ್.ಸಿ.ಸಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಂತರ ಅದೇ ಇಲಾಖೆಯಲ್ಲಿ ಗೆಜೆಟೆಡ್ ಅಧಿಕಾರಿಯಾಗಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ. ಪ್ರಸ್ತುತ ಹಾಸನ ನಗರ ಸಮೀಪ ಅತ್ತಿಹಳ್ಳಿ ಎಂಬ ಗ್ರಾಮದಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ಅಪ್ಪಟ ಮಲೆನಾಡಿನ ಪರಿಸರದಲ್ಲಿ ಹುಟ್ಟಿಬೆಳೆದ ನಾಗರಾಜು ಅವರು ಕನ್ನಡ ಸಾಹಿತ್ಯಲೋಕದಲ್ಲಿ ತಮ್ಮದೇ ಛಾಪುಮೂಡಿಸಿದ್ದಾರೆ. ...

READ MORE

Related Books