ನಂಜಿಲ್ಲದ ಪದಗಳು

Author : ಎನ್‌.ರವಿಕುಮಾರ್‌ ಟೆಲೆಕ್ಸ್‌

Pages 80

₹ 80.00




Published by: ಬಹುರೂಪಿ, ಬೆಂಗಳೂರು
Phone: 70191 82729

Synopsys

ಸಂಕಲನದಲ್ಲಿನ ಬಹುತೇಕ ಕವಿತೆಗಳು ಹೆಣ್ಣಿನ ಒಡಲಾಳದ ಆರ್ತನಾದವನ್ನು ಕುರಿತು ವಿವರಿಸುತ್ತವೆ. ಸಮಕಾಲಿನ ಸಮಾಜದಲ್ಲಿ ನಡೆಯುತ್ತಿರುವ ಅನ್ಯಾಯ, ಶೋಷಣೆ, ದೌರ್ಜನ್ಯ ಕ್ರೌರ್ಯದ ವಿರುದ್ಧ  ಧ್ವನಿ ಎತ್ತುತ್ತದೆ. ನಾನೂ ಗೌರಿ, ನಾನು ಆಸೀಫಾ, ಹಾಗೂ ನೀಲಿನಕ್ಷತ್ರ ಕವಿತೆಗಳು ಓದುಗರ ಮನಸನ್ನು ಮತ್ತೆ ಮತ್ತೆ ಕಾಡುತ್ತದೆ.

37 ಕವಿತೆಗಳನ್ನು ಹೊಂದಿರುವ ಈ ಕೃತಿಗೆ  ವಿಭಾ ಸಾಹಿತ್ಯ ಪ್ರಶಸ್ತಿ ದೊರೆತಿದೆ.

 

About the Author

ಎನ್‌.ರವಿಕುಮಾರ್‌ ಟೆಲೆಕ್ಸ್‌

ಪತ್ರಕರ್ತ, ಕವಿ ಎನ್. ರವಿಕುಮಾರ್ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರು. ತಂದೆ- ನಾಗಯ್ಯ, ತಾಯಿ- ಗಂಗಮ್ಮ. ಶಿವಮೊಗ್ಗ ಮತ್ತು ಮೈಸೂರಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅವರು ಪತ್ರಿಕೋದ್ಯಮವನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಂಡರು. ಲಂಕೇಶ್ ಪತ್ರಿಕೆ ಸೇರಿದಂತೆ ನಾಡಿನ ಹಲವು ವಾರಪತ್ರಿಕೆ, ದಿನಪತ್ರಿಕೆಗಳಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸಿರುವ ರವಿಕುಮಾರ್ ಸದ್ಯ ಶಿವಮೊಗ್ಗ ಟೆಲೆಕ್ಸ್ ಎಂಬ ಕನ್ನಡ ದಿನಪತ್ರಿಕೆಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.  2006ನೇ ಸಾಲಿನಲ್ಲಿ ಅತ್ಯುತ್ತಮ ಅಪರಾಧ ವರದಿಗಾಗಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯಮಟ್ಟದ  " ಗಿರಿಧರ ಪ್ರಶಸ್ತಿ" ಪಡೆದಿದ್ದ ಅವರು ಸಾಹಿತ್ಯ, ರಂಗಭೂಮಿಗಳಲ್ಲೂ ತೊಡಗಿಕೊಂಡಿದ್ದಾರೆ. ಅಲ್ಲದೇ 2016 -2018ನೇ ಸಾಲಿನಲ್ಲಿ ...

READ MORE

Related Books