ನನ್ನ ಪಯಣ

Author : ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)

Pages 168

₹ 140.00




Year of Publication: 2013
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

‘ನನ್ನ ಪಯಣ’ ಭಾರತರತ್ನ ಎಪಿಜೆ ಅಬ್ದುಲ್ ಕಲಾಂ ಅವರ ಇಂಗ್ಲಿಷ್ ಕೃತಿಯನ್ನು ಲೇಖಕ ಜಿ.ಕೆ ಮಧ್ಯಸ್ಥ ಕನ್ನಡಕ್ಕೆ ಅನುವಾದಿಸಿದ್ದಾರೆ. ಇದು ಕಲಾಂ ಅವರ ಬದುಕಿನ ದಾರಿಯ ಮೇಲೆ ಬೆಳಕು ಚೆಲ್ಲುವ ಕೃತಿ. ರಾಮೇಶ್ವರದ ಸಾಮಾನ್ಯ ಹುಡುಗನೊಬ್ಬ ವಿಜ್ಞಾನಿಯಾಗಿ ಸಾಧನೆಯ ಉತ್ತುಂಗಕ್ಕೇರಿ ದೇಶದ ಮಹೋನ್ನತ ರಾಷ್ಟ್ರಪತಿ ಪದವಿಯನ್ನೂ ಅಲಂಕರಿಸಿದ ಕಥನ ಈ ಕೃತಿಯಲ್ಲಿದೆ.

About the Author

ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)
(16 August 1945)

ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...

READ MORE

Related Books