ನವಿಲುಗರಿ

Author : ಕಂನಾಡಿಗಾ ನಾರಾಯಣ

Pages 76

₹ 40.00




Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಪ್ರಾಣಿ ಪಕ್ಷಿಗಳು, ಪರಿಸರದಲ್ಲಿಯ ಹಲವು ವಿಷಯಗಳನ್ನು‘ನವಿಲು ಗರಿ’ ಕಥಾ ಸಂಕಲನದ ಕಥೆಗಳ ಮೂಲಕ ಮಕ್ಕಳಿಗೆ ಪರಿಚಯಿಸಲಾಗಿದೆ. ಇವು ಮಕ್ಕಳಿಗೆ ಖುಷಿಯುಂಟು ಮಾಡುತ್ತ ವಯಸ್ಸಿಗೆ ಸಹಜವಾಗಿರುವ ಕುತೂಹಲವನ್ನು ತಣಿಸುತ್ತವೆ. ಪ್ರಾಣಿ-ಪಕ್ಷಿಗಳ ಬಗ್ಗೆ ಅನುಕಂಪ ಮೂಡಿಸುತ್ತಲೇ ಪರಿಸರವನ್ನು ಪ್ರೀತಿಯಿಂದ ಕಾಣುವಂತೆ ಪ್ರೇರೇಪಿಸುತ್ತವೆ ಇಲ್ಲಿಯ ಕತೆಗಳು.

About the Author

ಕಂನಾಡಿಗಾ ನಾರಾಯಣ

ಕಥೆಗಾರ ಕಂನಾಡಿಗಾ ನಾರಾಯಣ ಅವರದು ಕನ್ನಡ ಕಥನ ಪರಂಪರೆಯಲ್ಲಿ ಒಂದು ವಿಶಿಷ್ಟ ಸಂವೇದನೆ. ಪ್ರಾಣಿಲೋಕದೊಳಗಿನ ಮನುಷ್ಯ ಜಗತ್ತು. ಮನುಷ್ಯನೊಳಗಿರುವ ಮೃಗಲೋಕ ಎರಡರ ತಾಕಲಾಟಗಳನ್ನೂ ಒಂದು ಹದದಲ್ಲಿ ಹಿಡಿಯುವ ಇವರ ಕತೆಗಳು ಹೊಸ ಜಗತ್ತೊಂದನ್ನು ತೆರೆದಿಡುತ್ತವೆ. ಹಾಗೆಂದು ಇವೆರಡೇ ಇವರ ಆಸಕ್ತಿಯ ವಿಷಯವಲ್ಲ. ಸಮಾಜದಲ್ಲಿ ಬೇರೆ ಬೇರೆ ಸಂದರ್ಭಗಳಲ್ಲಿ ತಮ್ಮದಲ್ಲದ ತಪ್ಪಿಗೆ ಸಂದಿಗ್ಧತೆಯನ್ನು ಅನುಭವಿಸುವ ಅನೇಕ ಬಗೆಯ ಜನರ ನೋವುಗಳನ್ನು ಸೂಕ್ಷ್ಮವಾಗಿ ನಾರಾಯಣ ಅವರು ಹಿಡಿದಿಡುತ್ತಾರೆ. ಇಂತಹ ಮನುಷ್ಯ ವೇದನೆಯ ಕತೆಗಳನ್ನು ಕಡೆಯುವಾಗ ಕೊಂಚ ಜನಪ್ರಿಯ ದಾರಿಯನ್ನು ಹಿಡಿಯುವ ನಾರಾಯಣ ಅವರ ಕಥೆಗಳು ಪ್ರಾಣಿಗಳ ಲೋಕದ ತಾಕಲಾಟಗಳನ್ನು ಕಾಣಿಸಹೊರಟಾಗ ...

READ MORE

Related Books