ನೆಲೆ

Author : ಎಸ್.ಎಲ್. ಭೈರಪ್ಪ

Pages 187

₹ 175.00

Buy Now


Year of Publication: 1983
Published by: ಸಾಹಿತ್ಯ ಭಂಡಾರ
Address: ಶಾಪ್ ನಂ.8, ಜೆಎಂ ಲೇನ್, ಬಳೆಪೇಟೆ, ಬೆಂಗಳೂರು ಕರ್ನಾಟಕ 560053
Phone: 080 2287 7618

Synopsys

ನೂರ ಎಂಬತ್ತೇಳು ಪುಟಗಳ ಸಂಕ್ಷಿಪ್ತತೆಯಲ್ಲಿನೆಲೆಕಾದಂಬರಿಯು ರಚನೆಯಾಗಿದೆ. ’ನೆಲೆ’ ಕಾದಂಬರಿ ಅರಗಿಸಿಕೊಂಡಿರುವ ಘಟನೆ,  ಶೋಧನೆ ಚಿಂತನೆಗಳ ಆಳವಿಸ್ತಾರಗಳು ಅದ್ಭುತವಾಗಿವೆ. ನಿರುದ್ವೇಗದಿಂದ ವಸ್ತುವನ್ನು, ಮೂಲಕ ಜೀವನವನ್ನು ಇಲ್ಲಿ ನೋಡಿರುವ ರೀತಿಯು ಮಾಗಿ ಪಕ್ವವಾದ ದೊಡ್ಡ ಕಲಾವಿದನಿಗೆ ಮಾತ್ರ ಸಾಧ್ಯವಾಗುವಂಥದು.ಮೃತ್ಯುವಿನ ಅಂಚಿಗೆ ಪ್ರಜ್ಞೆಯು ತಲುಪಿದಾಗ ಮಾತ್ರ ಜೀವನದ ನಿಜವಾದ ಮಾಪನವು ಸಾಧ್ಯವೆಂಬ ಮೂಲಭೂತ  ಮಾತನ್ನು  ಕೃತಿ ತೋರಿಸಿಕೊಟ್ಟಿದೆ.

About the Author

ಎಸ್.ಎಲ್. ಭೈರಪ್ಪ
(20 August 1931)

ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ...

READ MORE

Related Books