ನೆನಪಿನ ಹಕ್ಕಿ

Author : ಚಂದ್ರಕಾಂತ ಪೋಕಳೆ

Pages 172

₹ 140.00




Published by: ಲಡಾಯಿ ಪ್ರಕಾಶನ
Address: 21, ಪ್ರಸಾದ ಹೋಟೆಲ್, ಗದಗ- 582101
Phone: 9480286844

Synopsys

ಸೋನಾಕಾಂಬಳೆ ಅವರು ಬರೆದ ಆತ್ಮಕಥೆಯನ್ನು ಚಂದ್ರಕಾಂತ್‌ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಇದು ಕೇವಲ ಆತ್ಮಕಥೆಯಲ್ಲ. ಸೋನಾ ಅವರ ಈ ಆತ್ಮಕತೆಯು ಅವರು ಅನುಭವಿಸಿದ ಕಷ್ಟ ನೋವುಗಳ ಜೊತೆಗೆ ಜಾತಿ ಹೆಸರಿನ ಕಾರಣಕ್ಕಾಗಿ ನಡೆಸಿಕೊಂಡ ರೀತಿ, ಅವಮಾನ, ಅನುಭವಿಸಿದ ಕಷ್ಟ ಕಾರ್ಪಣ್ಯಗಳನ್ನು ಹೊರಗೆಡವಿದೆ. ಇಡೀ ದಲಿತರ ಬದುಕನ್ನು ವಿವರಿಸುವ ಲೇಖಕರು ಕಾಲ ಬದಲಾದಂತೆ ದಲಿತರನ್ನು ಶೋಷಿಸುವ ರೀತಿ ಬದಲಾಗಿರುವುದು, ಜಾತಿ ಎಂಬ ಸಂಕೀರ್ಣ ಬಲೆ ಹೆಣೆದುಕೊಂಡಿರುವ ರೀತಿಯನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ. 

About the Author

ಚಂದ್ರಕಾಂತ ಪೋಕಳೆ
(20 August 1949)

ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು  ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...

READ MORE

Related Books