ನೋ ಪ್ರೆಸೆಂಟ್ಸ್ ಪ್ಲೀಸ್

Author : ಜಯಂತ ಕಾಯ್ಕಿಣಿ

Pages 240

₹ 225.00




Year of Publication: 2019
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 080-26617100 / 2667755

Synopsys

ಖ್ಯಾತ ಕವಿ, ಸಾಹಿತಿ ಜಯಂತ್ ಕಾಯ್ಕಿಣಿ ಅವರ ಕಥಾ ಸಂಕಲನ. ಅವರ ಮುಂಬೈ ಕಥೆಗಳನ್ನು ತೇಜಸ್ವಿನಿ ನಿರಂಜನ ಅವರು ಇಂಗ್ಲಿಷಿನಲ್ಲಿ ‘ನೋ ಪ್ರಸೆಂಟ್ಸ್ ಪ್ಲೀಸ್’ ಹೆಸರಿನಲ್ಲಿ ಪುಸ್ತಕ ಪ್ರಕಟಿಸಿದ್ದರು. ಆ ಕೃತಿಗೆ  ಪ್ರತಿಷ್ಠಿತ ಅಂತಾರಾಷ್ಟ್ರೀಯ ಡಿಎಸ್​ಸಿ ಪ್ರಶಸ್ತಿ ಲಭಿಸಿತ್ತು. ಆನಂತರ ಮೂಲ ಕಥೆಗಳನ್ನು ಒಟ್ಟು ಗೂಡಿಸಿ ಅದೇ ಹೆಸರಿನಲ್ಲಿ ಕನ್ನಡದಲ್ಲಿ ಕೃತಿ ಪ್ರಕಟಿಸಲಾಗಿದೆ. 

About the Author

ಜಯಂತ ಕಾಯ್ಕಿಣಿ
(24 January 1955)

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದ ಜಯಂತ ಅವರ ತಂದೆ ಗೌರೀಶ ಕಾಯ್ಕಿಣಿ ಹೆಸರಾಂತ ವಿಚಾರವಾದಿ ಲೇಖಕ.  ಆಧುನಿಕ ಬದುಕಿನ ಆತಂಕಗಳನ್ನು ಕತೆಯಾಗಿಸುವ ಜಯಂತ ಕಾಯ್ಕಿಣಿ ಅವರು ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರು.  ’ಕತೆಗಾರ’ ಎಂಬ ವಿಶೇಷಣ ಇದೆಯಾದರೂ ಅವರೊಬ್ಬ ಪ್ರಮುಖ ಕವಿ ಕೂಡ ಹೌದು. ಪ್ರಬಂಧ, ಅಂಕಣ ಬರಹ, ಚಲನಚಿತ್ರ ಸಂಭಾಷಣೆ ಮತ್ತು ಗೀತರಚನೆ ಹೀಗೆ ಹಲವು ಪ್ರಕಾರಗಳಲ್ಲಿ ಹೆಜ್ಜೆಗುರುತು ಮೂಡಿಸಿದ್ದಾರೆ. ’ಭಾವನಾ’ ಮಾಸಿಕ ಪತ್ರಿಕೆಯ ಸಂಪಾದಕರಾಗಿದ್ದ ಜಯಂತ ಅವರು ಈಟಿವಿ ವಾಹಿನಿಗಾಗಿ ’ನಮಸ್ಕಾರ’, ಬೇಂದ್ರೆ, ಕುವೆಂಪು, ಕಾರಂತ ನಮನ ಸರಣಿಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ರಂಗದಿಂದೊಂದಿಷ್ಟು ದೂರ, ಕೋಟಿತೀರ್ಥ, ಶ್ರಾವಣ ಮಧ್ಯಾಹ್ನ, ...

READ MORE

Related Books