ಒಟ್ಟಾರೆ ಕಥೆಗಳು

Author : ರವಿ ಬೆಳಗೆರೆ

Pages 296

₹ 243.00




Year of Publication: 2020
Published by: ಭಾವನಾ ಪ್ರಕಾಶನ
Address: ಪದ್ಮನಾಭನಗರ, ಬೆಂಗಳೂರು

Synopsys

ಪತ್ರಕರ್ತ ರವಿ ಬೆಳಗೆರೆ ಅವರ ಕಥಾ ಸಂಕಲನ- ಒಟ್ಟಾರೆ ಕಥೆಗಳು. ಲೇಖನ, ಅನುವಾದ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಕೃಷಿ ಮಾಡಿರುವ ರವಿ ಬೆಳಗೆರೆ ಅವರು ಬರೆದ ಕಥೆಗಳು ಕಾಲದೊಂದಿಗೆ ಹೆಜ್ಜೆ ಹಾಕುವ ವಿಷಯ ವಸ್ತುವನ್ನು ಹೊಂದಿರುತ್ತವೆ. ವಿಷಯ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.

About the Author

ರವಿ ಬೆಳಗೆರೆ
(15 March 1958 - 13 November 2020)

ಕನ್ನಡದ ಪ್ರಮುಖ ಪತ್ರಕರ್ತರಲ್ಲಿ ಒಬ್ಬರಾದ ರವಿ ಬೆಳಗೆರೆ ಅವರು 15 ಮಾರ್ಚ್ 1958 ಬಳ್ಳಾರಿಯಲ್ಲಿ ಜನಿಸಿದರು. ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ., ಮಾಡಿದ್ದ ಇವರು ಮೊದಲು ಪ್ರಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದರು. ನಂತರ ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸಿದರು. ಲಂಕೇಶ್ ಪತ್ರಿಕೆಯಲ್ಲಿ ನಿಯಮಿತವಾಗಿ ಬರೆಯುತ್ತಿದ್ದ ಅವರು ಆಮೇಲೆ ತಾವೇ ಸ್ವತಃ ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದರು. ಹಾಯ್ ಬೆಂಗಳೂರ್ ವಾರಪತ್ರಿಕೆಯು ಓದುಗರ ಮನಗೆದ್ದು ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಸಂಚಲನ ಮೂಡಿಸಿತು. ಹಾಯ್ ಬೆಂಗಳೂರು ಪತ್ರಿಕೆಯ ಜೊತೆಗೆ ಓ ಮನಸೇ ಪಾಕ್ಷಿಕ ಪ್ರಾರಂಭಿಸಿದರು. ಶಿವರಾಮ ಕಾರಂತ ...

READ MORE

Related Books