ಪರಿಧಾವಿ

Author : ಅಜಿತ್ ಹರೀಶಿ

Pages 144

₹ 115.00




Published by: ಅಕ್ಷಯ ಪ್ರಕಾಶನ ಬೆಂಗಳೂರು

Synopsys

ಡಾ.ಅಜಿತ್ ಹೆಗಡೆ ಹರೀಶಿ ವೃತ್ತಿಯಿಂದ ವೈದ್ಯರು. ದಿನನಿತ್ಯ ನೂರಾರು ರೋಗಿಗಳ ಜೊತೆಗೆ ಮಾತುಕತೆ ನಡೆಸಿ, ನೊಂದ ಜೀವಗಳಿಗೆ ಸಾಂತ್ವನ ಹೇಳುತ್ತಲೇ ಕಥೆಗಳನ್ನು ಹೊಸೆಯುವ ಕಲೆ ಅವರಿಗೆ ಕರಗತವಾಗಿದೆ.

ಇದಲ್ಲದೆ ಕಥೆ, ಕವನ, ನಾಟಕ ರಚನೆ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರು.”ಪರಿಧಾವಿ’ಯಲ್ಲಿ 12 ಕಥೆಗಳಿವೆ. ಸ್ಥಿತ್ಯಂತರ, ಸಮಕಾಲೀನ ಸಮಸ್ಯೆಗಳು ಮತ್ತು ಒಳಗಿನ ತಲ್ಲಣಗಳ ಬಗ್ಗೆ ಅವರು ವಿವರಿಸಿದ್ದಾರೆ. 

About the Author

ಅಜಿತ್ ಹರೀಶಿ
(24 August 1978)

ಲೇಖಕ ಡಾ. ಅಜಿತ್  ಹರೀಶಿ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಹರೀಶಿ ಗ್ರಾಮದವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹುಟ್ಟೂರಿನ ಸರ್ಕಾರಿ ಶಾಲೆಗಳಲ್ಲಿ, ಪದವಿಪೂರ್ವ ಶಿಕ್ಷಣವನ್ನು ಶಿರಸಿಯಲ್ಲಿ ಮುಗಿಸಿರುತ್ತಾರೆ. ಆಯುರ್ವೇದ ಮಹಾವಿದ್ಯಾಲಯ, ಹುಬ್ಬಳ್ಳಿಯಲ್ಲಿ ವೈದ್ಯಕೀಯ ಪದವೀಧರರಾದ  ಇವರು, ಆಕ್ಯುಪಂಕ್ಚರ್ ಚಿಕಿತ್ಸೆ , ಹಿಪ್ನೋಥೆರಪಿಯಲ್ಲಿಯೂ ಪರಿಣಿತರು.  ಪ್ರಸ್ತುತ ಹರೀಶಿಯಲ್ಲಿ ಖಾಸಗಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ಬರವಣಿಗೆಯನ್ನು ತಮ್ಮ ಪ್ರವೃತ್ತಿಯನ್ನಾಗಿಸಿಕೊಂಡಿದ್ದಾರೆ. ಬಿಳಿಮಲ್ಲಿಗೆಯ ಬಾವುಟ, ಸೂರು ಸೆರೆಹಿಡಿಯದ ಹನಿಗಳು, ಕನಸಿನ ದನಿ ಪ್ರಕಟಿತ ಕವನ ಸಂಕಲನಗಳು.  ಪರಿಧಾವಿ, ಕಾಮೋಲ ಮತ್ತು ಮೂಚಿಮ್ಮ ಪ್ರಕಟಿತ ಕಥಾಸಂಕಲನಗಳು.  ಕಥಾಭರಣ ಸಂಪಾದಿತ ಕೃತಿಯಾಗಿದೆ. ಆರೋಗ್ಯದ ಅರಿವು ...

READ MORE

Related Books