ಪ್ರತಿಭಾ ನಂದಕುಮಾರ್ ಅವರ ಆಯ್ದ ಕವಿತೆಗಳು

Author : ಪ್ರತಿಭಾ ನಂದಕುಮಾರ್

Pages 108

₹ 75.00




Year of Publication: 2007
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

’ನಾವು ಹುಡುಗಿಯರೇ ಹೀಗೆ’ ಕವನ ಸಂಕಲನದ ಮೂಲಕ ಕನ್ನಡ ಕಾವ್ಯ ಲೋಕ ಪ್ರವೇಶಿಸಿದ ಪ್ರತಿಭಾ ಅವರು ಇದುವರೆಗೆ ಒಂಬತ್ತು ಕವನ ಸಂಕಲನ ಪ್ರಕಟಿಸಿದ್ದಾರೆ. ಕನ್ನಡದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿರುವ ಪ್ರತಿಭಾ ಅವರ ಆಯ್ದ ಕವಿತೆಗಳನ್ನು ಈ ಸಂಕಲನದಲ್ಲಿ ಸೇರಿಸಲಾಗಿದೆ.

About the Author

ಪ್ರತಿಭಾ ನಂದಕುಮಾರ್
(25 December 1955)

ಲೇಖಕಿ ಪ್ರತಿಭಾ ನಂದಕುಮಾರ್ ಅವರು ಮೂಲತಃ ಬೆಂಗಳೂರಿನವರು. 1955 ಡಿಸೆಂಬರ್ 25ರಂದು ಜನಿಸಿದರು. ತಂದೆ-ವಿ. ಎಸ್. ರಾಮಚಂದ್ರರಾವ್, ತಾಯಿ- ಯಮುನಾಬಾಯಿ. ಬಾಲ್ಯದ ಬಹುದಿನಗಳನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ಕಳೆದಿರುವ ಪ್ರತಿಭಾ, ಮದ್ರಾಸ್ ವಿಶ್ವವಿದ್ಯಾಲಯದಿಂದ ಎಂ.ಎ ಮತ್ತು ಎಂ.ಫಿಲ್ ಪದವಿ ಪಡೆದಿದ್ದಾರೆ. ಎನ್.ಜಿ.ಎಫ್‌ನಲ್ಲಿ ಭಾಷಾಂತರಕಾರರಾಗಿ ನಂತರ ಇಂಡಿಯನ್ ಎಕ್ಸ್‌ಪ್ರೆಸ್, ಡೆಕ್ಕನ್ ಹೆರಾಲ್ಡ್ ಮತ್ತು ಅಗ್ನಿ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಜೊತೆಗೆ ಸಿನಿಮಾ ರಂಗದಲ್ಲಿಯೂ ಸಹಾಯಕ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಪತಿ ನಂದಕುಮಾರ್ ಹಾಗೂ ಮಕ್ಕಳು ಅಭಿರಾಮ್ ಮತ್ತು ಭಾಮಿನಿ ಜೊತೆ ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಪ್ರತಿಭಾ ನಂದಕುಮಾರ್ ಕಾವ್ಯಧರ್ಮವನ್ನೇ ...

READ MORE

Related Books