ಪ್ರತಿದ್ವಂದಿ

Author : ಕುಂ. ವೀರಭದ್ರಪ್ಪ

Pages 168

₹ 85.00




Year of Publication: 2008
Published by: ಹೇಮಂತ ಸಾಹಿತ್ಯ

Synopsys

ಈ ಲೇಖಕರ ‘ಅರಮನೆ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಹುಮಾನ ಬಂದಿದೆ. ಇವರ ಮನ ಮೆಚ್ಚಿದ ಹುಡುಗಿ, ಕೆಂಡದ ಮಳೆ, ಕೊಟ್ರೇಶಿ ಕನಸು, ದೊರೆ, ಬೇಲಿ ಮತ್ತು ಹೊಲ ಚಲನ ಚಿತ್ರಗಳಾಗಿವೆ. ಕುಂ. ವೀ. ಯವರ ಸಾಹಿತ್ಯದಲ್ಲಿ ಗ್ರಾಮೀಣ ಚಿತ್ರಣ ಗಾಢವಾಗಿದೆ. ಕನ್ನಡ ಭಾಷೆಯ ಸೊಗಸು, ಸೊಗಡು ಇವರ ಕೃತಿಗಳಲ್ಲಿ ಮಿಂಚುತ್ತದೆ. ಇತ್ತೀಚೆಗೆ ಇವರು ಶಿಕ್ಷಕ ವೃತ್ತಿಯಿಂದ ನಿವೃತ್ತರಾಗಿ ಸಂಪೂರ್ಣವಾಗಿ ಸಾಹಿತ್ಯ ಸೇವೆಗೆ ಬದುಕು ಅಣಿಗೊಳಿಸಿದ್ದಾರೆ.

About the Author

ಕುಂ. ವೀರಭದ್ರಪ್ಪ
(01 October 1953)

ಕುಂ.ವೀ. ಎಂದೇ ಜನಪ್ರಿಯರಾಗಿರುವ ಕಾದಂಬರಿಕಾರ, ಕತೆಗಾರ ಕುಂ. ವೀರಭದ್ರಪ್ಪ ಅವರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನವರು. 1953ರ ಅಕ್ಟೋಬರ್ 1ರಂದು ಜನಿಸಿದರು. ‘ಬೇಲಿ ಮತ್ತು ಹೊಲ’ ಕಿರುಕಾದಂಬರಿಯ ಮೂಲಕ ಕನ್ನಡ ಸಾಹಿತ್ಯದ ಶಿಷ್ಟ ಪರಂಪರೆಯ ಬೇಲಿಗಳನ್ನು ಜಿಗಿದ ಕುಂ. ವೀರಭದ್ರಪ್ಪ, ಓದುಗರನ್ನು ಆಕರ್ಷಿಸಿದ್ದು ತಮ್ಮ ವಿಶಿಷ್ಟ ಭಾಷಾ ಪ್ರಯೋಗ ಮತ್ತು ನುಡಿಗಟ್ಟುಗಳಿಂದ. ಅವರ ಕತೆಗಳಲ್ಲಿ ಕಾದಂಬರಿಗಳಲ್ಲಿ ಕಾಣಿಸಿಕೊಂಡ ಭಾಷೆ ಅವರಿಗೆ ಸಾಹಿತ್ಯದಲ್ಲೊಂದು ಪ್ರತ್ಯೇಕ ಸ್ಥಾನ ಕಲ್ಪಿಸಿಕೊಟ್ಟಿತು. ’ಎಲುಗನೆಂಬ ಕೊರಚನೂ ಚವುಡನೆಂಬ ಹಂದಿಯೂ’, ’ಕತ್ತಲಿಗೆ ತ್ರಿಶೂಲ ಹಿಡಿದ ಕತೆ’ಗಳ ಮೂಲಕ ಸಣ್ಣ ಕತೆಯ ದಿಕ್ಕನ್ನು ಬದಲಾಯಿಸಿದರು. ಶಿವರಾಜ್ ...

READ MORE

Related Books