ಪ್ರೊ. ಎಸ್.ಕೆ. ರಾಮಚಂದ್ರರಾಯರು

Author : ಜಿ.ಬಿ. ಹರೀಶ

Pages 94

₹ 60.00




Year of Publication: 2015
Published by: ಉದಯಭಾನು ಕಲಾಸಂಘ
Address: ಉದಯಭಾನು ಕಲಾಸಂಘ, ಗವೀಪುರ ಸಾಲು ಛತ್ರಗಳ ಎದುರು, ರಾಮಕೃಷ್ಣಮಠ ಬಡಾವಣೆ ಕೆಂಪೇಗೌಡನಗರ, ಬೆಂಗಳೂರು- 560019
Phone: (080-26609343 / 26601831)

Synopsys

ಸಾಲಿಗ್ರಾಮ ಕೃಷ್ಣ ರಾಮಚಂದ್ರರಾಯರು ಪ್ರಮುಖ ವಿದ್ವಾಂಸರು. ಸಂಸ್ಕೃತ, ಪಾಳಿ, ಕನ್ನಡ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತಿಯನ್ನು ಹೊಂದಿದವರು. ಇವರು  ವೇದ, ವೇದಾಂತ, ಮೀಮಾಂಸೆ, ಶಾಸ್ತ್ರ, ಆಗಮಶಾಸ್ತ್ರ, ಜ್ಯೋತಿಷ್ಯಶಾಸ್ತ್ರ, ಶಿಲ್ಪಶಾಸ್ತ್ರ, ಸಂಗೀತ ಶಾಸ್ತ್ರ, ಹಾಗೂ ಆಯುರ್ವೇದ ಶಾಸ್ತ್ರ ಮುಂತಾದ ಶಾಸ್ತ್ರಗಳನ್ನು ಆಳವಾಗಿ ಅಭ್ಯಸಿಸಿ ಅವುಗಳಲ್ಲಿ ಮೇರು-ಪಾಂಡಿತ್ಯವನ್ನು ಸಂಪಾದಿಸಿದ್ದರು.

ಬೆಂಗಳೂರಿನ ನಿಮ್ಹಾನ್ಸ್ ವೈದ್ಯಕೀಯ ಸಂಸ್ಥೆಯಲ್ಲಿ ಮಾನಸಿಕ ಶಿಕ್ಷಣ ವಿಭಾಗದ ಪ್ರಮುಖರಾಗಿ, ಶಿಲ್ಪಕಲಾ ಪ್ರತಿಷ್ಠಾನದ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದಾರೆ. ’ಶ್ರೀವಿದ್ಯಾದಲ್ಲಿನ ತಾಂತ್ರಿಕ ಸಂಪ್ರದಾಯಗಳು, ’ಭಾರತೀಯ ಔಷಧ ಚಿಕಿತ್ಸೆ ಮತ್ತು ಪತ್ತೆಯ ವಿಧಾನಗಳು ವಿಶ್ವಕೋಶ, ಆರೋಗ್ಯ ಹಾಗೂ ರೋಗ-ಪ್ರಬಲ ಬಲ’ ಮೊದಲಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ, ಕರ್ನಾಟಕ ಸಂಗೀತ ಹಾಗೂ ನೃತ್ಯ ಅಕಾಡೆಮಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ.  ಉದಯಭಾನು ಕಲಾಸಂಘದ ಸಾಧಕರ ಪುಸ್ತಕ ಮಾಲೆಗಾಗಿ ಡಾ. ಜಿ.ಬಿ. ಹರೀಶ್‌ ಇವರನ್ನು ಪರಿಚಯಿಸಿದ್ದಾರೆ. 

About the Author

ಜಿ.ಬಿ. ಹರೀಶ

ಜಿ.ಬಿ ಹರೀಶ್ ಅವರು ಹೊಸ ತಲೆಮಾರಿನ ಗಂಭೀರ ವಿಮರ್ಶಕರಲ್ಲಿ ಒಬ್ಬರು. ಕನ್ನಡ ಕಾವ್ಯಗಳು, ಜೈನ, ಬೌದ್ಧ ಮತ್ತು ಶಾಸ್ತ್ರ ಸಾಹಿತ್ಯ ವಿಷಯಗಳಲ್ಲಿ ವಿಶೇಷ ಪರಿಣತಿ ಪಡೆದಿದ್ದಾರೆ. ಮೈಸೂರು ವಿ.ವಿ.ಯಿಂದ ಕನ್ನಡ ಸ್ನಾತಕೋತ್ತರ ಪದವಿಯನ್ನು ಪಡೆದು ಕೊಂಡ ಇವರು ದೇವಚಂದ್ರನ ರಾಜಾವಳಿ ಕಥಾಸಾರ: ಜೈನ ಸಾಹಿತ್ಯಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಅಧ್ಯಯನ ಎಂಬ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಸಾಹಿತ್ಯ, ಕಲೆ ಮತ್ತು ತತ್ವಶಾಸ್ತ್ರ ಇವರ ಆಸಕ್ತಿಯ ಕ್ಷೇತ್ರಗಳು, ತುಮಕೂರು ವಿ.ವಿ., ಬೆಂಗಳೂರಿನ ಶೇಷಾದ್ರಿಪುರಂ ಸ್ನಾತಕೋತ್ತರ ಕೇಂದ್ರ, ಎಂ.ಇ.ಎಸ್. ಸ್ನಾತಕೋತ್ತರ ಕೇಂದ್ರ, ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನ ಸೇರಿದಂತೆ ಹಲವು ...

READ MORE

Related Books