ಪೂರ್ಣಚಂದ್ರ ತೇಜಸ್ವಿ ಅವರ ಆಯ್ದ ಕಥೆಗಳು

Author : ಕೆ.ಪಿ. ಪೂರ್ಣಚಂದ್ರ ತೇಜಸ್ವಿ

Pages 108

₹ 75.00




Year of Publication: 2006
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಕನ್ನಡದ ಪ್ರಮುಖ ಗದ್ಯ ಬರಹಗಾರರಲ್ಲಿ ಒಬ್ಬರು. ಕನ್ನಡದ ಸಣ್ಣಕತೆಗಳ ಕ್ಷಿತಿಜ ವಿಸ್ತರಿಸುವುದಕ್ಕೆ ಕಾರಣರಾದ ತೇಜಸ್ವಿ ಅವರ ಕತೆಗಳನ್ನು ಓದುವುದೇ ಒಂದು ಸೊಗಸು. ತೆಳುಹಾಸ್ಯ ತೇಜಸ್ವಿಯವರ ಗದ್ಯದ ಪ್ರಮುಖ ಗುಣ ಅದು ಅವರ ಕತೆಯಲ್ಲಿಯೂ ಪ್ರಮುಖವಾಗಿ ಕಾಣಿಸುತ್ತದೆ. ಕನ್ನಡ ಸಾಹಿತ್ಯ ಓದಲು ಆರಂಭಿಸುವವರನ್ನು ಗಮನದಲ್ಲಿ ಇಟ್ಟು ಸಿದ್ಧಪಡಿಸಿದ ಆಯ್ದ ಕತೆಗಳ ಸಂಕಲನವಿದು. ತೇಜಸ್ವಿಯವರ ಕಥನ ಶೈಲಿಯ ಮುಖಗಳನ್ನು ಪರಿಚಯಿಸುತ್ತದೆ. ಮುದ ನೀಡುವ ಓದಿಗೆ ಕಾರಣರಾಗುತ್ತವೆ.

About the Author

ಕೆ.ಪಿ. ಪೂರ್ಣಚಂದ್ರ ತೇಜಸ್ವಿ
(08 September 1938 - 05 April 2007)

ಕನ್ನಡದ ಹೆಸರಾಂತ ಲೇಖಕ ಕುವೆಂಪು ಅವರ ಪುತ್ರರಾಗಿರುವ ಪೂರ್ಣಚಂದ್ರ ತೇಜಸ್ವಿ ಅವರು 08-09-1938ರದು ಜನಿಸಿದರು. ತಮ್ಮ ಬರವಣಿಗೆಯ ಮೂಲಕವೇ ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ. ’ಚಿದಂಬರ ರಹಸ್ಯ’ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ತೇಜಸ್ವಿ ಅವರು ಕನ್ನಡದಲ್ಲಿ ನವ್ಯ ಸಾಹಿತ್ಯ ಚಳುವಳಿಯು ಉಚ್ಛ್ರಾಯ ಸ್ಥಿತಿಯಲ್ಲಿದ್ದ  ದಿನಗಳಲ್ಲಿ ಅದಕ್ಕಿಂತ ಭಿನ್ನವಾದ ನೆಲೆಯ ಬರವಣಿಗೆಯಲ್ಲಿ ತೊಡಗಿಸಿಕೊಂಡಿದ್ದರು. ನವ್ಯ ಲೇಖಕರು ನಗರ ಕೇಂದ್ರಿತ, ವ್ಯಕ್ತಿನಿಷ್ಟ ಸಾಹಿತ್ಯ ರಚನೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಬದುಕು ಕುರಿತ ಮತ್ತು ಅದು ಹಳಹಳಿಕೆಯ ಧ್ವನಿಯಲ್ಲಿ ಇರದ ಹಾಗೆ ನೋಡಿಕೊಂಡರು. ಲೋಹಿಯಾ ಚಿಂತನೆಗಳಿಂದ ಪ್ರೇರಿತರಾಗಿದ್ದ ...

READ MORE

Related Books