ಪು. ತಿ. ನ. ಅವರ ಆಯ್ದ ಬರಹಗಳು

Author : ಪು.ತಿ.ನ. (ಪು.ತಿ. ನರಸಿಂಹಾಚಾರ್ )

Pages 108

₹ 75.00




Year of Publication: 2007
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಕವಿ ಪು.ತಿ. ನರಸಿಂಹಾಚಾರ್ ಅವರು ಸೊಗಸಾದ ಗದ್ಯ ಬರಹಗಾರ ಕೂಡ. ಗೀತನಾಟಕಗಳ ಮೂಲಕ ರಂಗದ ಮೇಲೆ ವಿಭಿನ್ನ ಲೋಕ ಸೃಷ್ಟಿಸಲು ಕಾರಣರಾದ ನರಸಿಂಹಾಚಾರ್‌ ಅವರ ಗದ್ಯ ಬರಹಗಳು ಈ ಸಂಕಲನದಲ್ಲಿವೆ. ಪ್ರಬಂಧ-ಸಾಹಿತ್ಯ ವಿಮರ್ಶೆಗಳಲ್ಲಿ ಕೆಲಸ ಮಾಡಿರುವ ನರಸಿಂಹಾಚಾರ್‌ ಅವರ ಗದ್ಯ ಬರವಣಿಗೆಯ ಸೊಗಸು ಈ ಸಂಕಲನ ಬರಹಗಳಲ್ಲಿ ನೋಡಲು ಸಿಗುತ್ತದೆ.

About the Author

ಪು.ತಿ.ನ. (ಪು.ತಿ. ನರಸಿಂಹಾಚಾರ್ )
(17 March 1905 - 13 October 1998)

ಪುತಿನ ಎಂದು ಚಿರಪರಿಚಿತರಾಗಿದ್ದ ಪುರೋಹಿತ ತಿರುನಾರಾಯಣ ನರಸಿಂಹಾಚಾರ್ ಅವರು ಕನ್ನಡ ನವೋದಯ ಕವಿಗಳಲ್ಲಿ ಪ್ರಮುಖರು. ಮೇಲುಕೋಟೆಯಲ್ಲಿ 1905ರ ಮಾರ್ಚ್ 17ರಂದು ಜನಿಸಿದರು. ತಂದೆ ತಿರುನಾರಾಯಣ ಅಯ್ಯಂಗಾರ್, ತಾಯಿ ಶಾಂತಮ್ಮ.  ಬಾಲ್ಯದ ವಿದ್ಯಾಭ್ಯಾಸವನ್ನು ಮೇಲುಕೋಟೆ ಮತ್ತು ಮೈಸೂರಿನಲ್ಲಿ ಮುಗಿಸಿದ ನಂತರ ಬಿ.ಎ. ಪದವಿಯನ್ನು ಗಳಿಸಿದ ಮೇಲೆ ಗೋರಕ್ಷಕ ಸಮಿತಿಯಲ್ಲಿ ಗುಮಾಸ್ತರಾಗಿ ಕಾರ್ಯನಿರ್ವಹಿಸಿದರು. ಅನಂತರ ಸೈನ್ಯದ ಮುಖ್ಯಾಧಿಕಾರಿಗಳ ಕಚೇರಿಯಲ್ಲಿ ಕೆಲಸಕ್ಕೆ ಸೇರಿದರು. ಅದೇ ಕಚೇರಿಯಲ್ಲಿ 1938ರಲ್ಲಿ ವ್ಯವಸ್ಥಾಪಕರಾಗಿಯೂ 1945ರಲ್ಲಿ ಅಧೀಕ್ಷಕರಾಗಿಯೂ ಕೆಲಸ ಮಾಡಿದ್ದ ಅವರು ಅನಂತರ 1952ರಲ್ಲಿ ಶಾಸನ ಸಭಾ ಕಚೇರಿಯ ಸಂಪಾದಕರೂ ಆಗಿದ್ದರು. ಕನ್ನಡ ವಿಶ್ವಕೋಶದ ಕಚೇರಿಯಲ್ಲಿ ಭಾಷಾಂತರಕಾರ ...

READ MORE

Related Books