ರಕ್ತ ವಿಲಾಪ

Author : ವಿಕ್ರಮ ವಿಸಾಜಿ

Pages 61

₹ 63.00




Year of Publication: 2020
Published by: ಪಲ್ಲವ ಪ್ರಕಾಶನ
Address: # ಚನ್ನಪಟ್ಟಣ ಅಂಚೆ, ಎಮ್ಮಿಗನೂರು (ವಯಾ) ಬಳ್ಳಾರಿ-583113.
Phone: 9840354507

Synopsys

ರಕ್ತ ವಿಲಾಪ ಎಂಬುದು ಲೇಖಕ ಡಾ. ವಿಕ್ರಮ ವಿಸಾಜಿ ಅವರು ಬರೆದ ನಾಟಕ. ಮಹಾಭಾರತದಲ್ಲಿ ದುರ್ಯೋಧನನ ವಿಲಾಪವನ್ನು ಪ್ರಮುಖ ಅಂಕವನ್ನಾಗಿಸಲಾಗಿದೆ. ನಾಟಕವು ರಕ್ತದಲ್ಲಿ ಅಂತ್ಯಗೊಳ್ಳುತ್ತಿದೆಯಾದರೂ ಜೀವನದ ಉದ್ದೇಶ ರಕ್ತ ಅಥವಾ ದ್ವೇಷವಲ್ಲ. ಸಹಬಾಳ್ವೆಯೇ ಬದುಕು ಎಂಬ ಸಂದೇಶ ನೀಡುತ್ತದೆ. ನಾಟಕದ ಕಥಾವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ನಾಟಕವು ಓದುಗರ ಗಮನ ಸೆಳೆಯುತ್ತದೆ.

About the Author

ವಿಕ್ರಮ ವಿಸಾಜಿ

ಕಲಬುರ್ಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕರಾಗಿರುವ ವಿಕ್ರಮ ವಿಸಾಜಿ ಅವರು ಕವಿ-ವಿಮರ್ಶಕ. ಬೀದರ ಜಿಲ್ಲೆಯ ಭಾಲ್ಕಿಯವರಾದ ವಿಕ್ರಮ ಅವರ ತಂದೆ ಹೆಸರಾಂತ ಕವಿ-ಲೇಖಕರು. ಬಾಲ್ಯದಲ್ಲಿಯೇ ಕವಿತೆ ಬರೆಯುವುದನ್ನು ಆರಂಭಿಸಿದ ವಿಕ್ರಮ ಅವರು ಹೈಸ್ಕೂಲಿನಲ್ಲಿದ್ದಾಗಲೇ ಕವನ ಸಂಕಲನ ಪ್ರಕಟಿಸಿದ್ದರು.  ಕಲಬುರ್ಗಿಯ ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ (ಎಂ.ಎ) ಪದವಿ ಪಡೆದ ಅವರು ಕಂಬಾರರ ಕಾವ್ಯದ ಮೇಲೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್‌.ಡಿ. ಪದವಿ ಪಡೆದಿದ್ದಾರೆ. ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿ ಸೊಂಡೂರು, ರಾಯಚೂರು ಸ್ನಾತಕೋತ್ತರ ಕೇಂದ್ರಗಳಲ್ಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದರು.  ಕನ್ನಡ ಸಾಹಿತ್ಯ ಪರಿಷತ್ತು ...

READ MORE

Related Books