ಋಷ್ಯಶೃಂಗ

Author : ಹರೀಶ್ ಹಾಗಲವಾಡಿ

Pages 136

₹ 125.00




Year of Publication: 2020
Published by: ಛಂದ ಪುಸ್ತಕ
Address: ಐ-004, ಮಂತ್ರಿಪ್ಯಾರಡೈಸ್‌ ಬನ್ನೇರುಘಟ್ಟ ರಸ್ತೆ, ಬೆಂಗಳೂರು-560076
Phone: 9844422782

Synopsys

ಕೃತಿಗೆ ಬೆನ್ನುಡಿ ಬರೆದಿರುವ ನಾಗರಾಜ ವಸ್ತಾರೆ ಅವರು “ಈ ಬೆಂಗಳೂರು ನಿನ್ನನ್ನು ಕಾಡಿರುವಷ್ಟೇ- ಬಹುಶಃ ಇನ್ನೂ ಹೆಚ್ಚು, ನನ್ನನ್ನು ಕೆಣಕಿರುವುದು ಹೌದು. ಆದರೆ, ಇನ್ನೂ ಮದುವಣಿಗನಾಗದ ಅವಸ್ಥೆಯಲ್ಲಿರುವ ನೀನು, ನಿನ್ನಂಥವರು ಕಾಣುವ ಈ ಶಹರ, ಶಾಹರಿಕತೆ ನನ್ನಲ್ಲಿ ಬೆರಗು ಹುಟ್ಟಿಸುತ್ತದೆ. ಉದ್ಯೋಗದೊಡನೆ ದುಡ್ಡು ಕೊಡುವ ಈ ಊರು ಜೀವನಕ್ಕೊಂದು ಕ್ರಮವನ್ನೂ ಕೊಡುತ್ತದೆನ್ನುವ ನಿನ್ನ ಮಾತಿಗೆ ಸಲಾಮು. ಇಷ್ಟಿದ್ದೂ, `ಇದು ಅರ್ಥವಾಗದ ಯಕ್ಷಿಣಿ' ಅಂತನ್ನುವುದು ನಿನ್ನದೇ ಇನ್ನೊಂದು ಮಾತು. ಇಲ್ಲಿನ ಬದುಕನ್ನು ಜೇನುಗೂಡು, ರೇಶ್ಮೆಗೂಡುಗಳಂತೆ ಗ್ರಹಿಸಿರುವುದು ಇಷ್ಟವಾದ ಇನ್ನೊಂದು ಸಂಗತಿ. ಏನೇ ಇರಲಿ, ನಿನ್ನ ಗ್ರಹಿಕೆ ನಿನ್ನ ಕಾಣ್ಕೆ. ಆದರೆ, ನಿನ್ನ ನೋಟವನ್ನು ಸಾರ್ವತ್ರಿಕ-ಸಾರ್ವಕಾಲಿಕ ಸಂಗತಿಯೆಂಬಂತೆ ಮನ್ನಣೆಗಿಡುತ್ತೀಯಲ್ಲ, ಅದು ಇಷ್ಟವಾಗದಿದ್ದರೂ, ನಿನ್ನ ಎದೆಗಾರಿಕೆಗೆ ಜೈ. ವಯಸ್ಸಿಗೆ ತಕ್ಕ ಲಂಪಟತನಕ್ಕೆ ಚೌಕಟ್ಟು ಹಾಕುವ ನಿನ್ನ ಹುಂಬತನಕ್ಕೆ ತುಸು ಇರುಸುಮುರುಸಾಯಿತಾದರೂ ಇದು ನಿನ್ನ ಮೆಥಡೆಂದು ಸುಮ್ಮನಾಗಿದ್ದೇನೆ. ಇನ್ನು, ನಿನ್ನ ಋಷ್ಯಶೃಂಗ-ತೆಯ ಬಗ್ಗೆ ಕಡೆಯಲ್ಲಿ ಹೇಳಿದ್ದು ಮನಸ್ಸು ನಾಟಿತು. ಬಹುಶಃ, ಇದು ನಮ್ಮೆಲ್ಲರ ಋಷ್ಯಶೃಂಗ-ತೆಯೂ ಹೌದು. `ವಿ ಸ್ಟಾರ್ಟ್ ಕನ್ಸ್ಯೂಮಿಂಗ್ ವಾಟೆವರ್ ಕಮ್ಸ್ ಇನ್ ಅವರ್ ವೇ...' ಅನ್ನುವ ಮಾತಿನ ಹಿಂದೆಯೇ, ಪರಾವರ್ತಿತ ರಿಫ್ಲೆಕ್ಸಿನಂತೆ ಅನಿಸಿದ್ದು- `ವಾಟ್ ಇಫ್ ಇಟ್ ಕನ್ಸ್ಯೂಮ್ಸ್ ದಿ ಸೆಲ್ಫ್?' ಅನ್ನೋದು. ಹೋಪ್ ದಟ್ ವೋಂಟ್ ಹ್ಯಾಪನ್. ಅಂಡ್, ಯೂ ವೋಂಟ್ ಲೆಟ್ ದಟ್ ಹ್ಯಾಪನ್. ಒಂದಷ್ಟು ಚಿಯರುಗಳು” ಎಂದಿದ್ದಾರೆ.

About the Author

ಹರೀಶ್ ಹಾಗಲವಾಡಿ

ಲೇಖಕ ಹರೀಶ್ ಹಾಗಲವಾಡಿ ಅವರು ಮೂಲತಃ ತುಮಕೂರಿನವರು. ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದು ಎ.ಎಸ್.ಸಿ. ಡಿಗ್ರಿ ಕಾಲೇಜಿನ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ 'ಋಷ್ಯಶೃಂಗ' ಕೃತಿಯನ್ನು ಛಂದ ಪುಸ್ತಕ ಪ್ರಕಟಿಸಿದೆ. ...

READ MORE

Related Books