ಸಬರದ ಕವಿತೆಗಳು

Author : ಬಸವರಾಜ ಸಬರದ

Pages 253

₹ 65.00




Year of Publication: 2000
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಬಸವರಾಜ ಸಬರದರವರು ಮೂಲತ ಕೊಪ್ಪಳದವರಾಗಿದ್ದು, ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಎಮ್.ಎ ಪದವಿಯನ್ನು ಪಡೆದಿದ್ದಾರೆ. ಕನ್ನಡ ಸಾಹಿತ್ಯದಲ್ಲಿ ತಮ್ಮದೇ ಆದ ನೆಲೆಯನ್ನು ಕಂಡುಕೊಂಡ ಇವರು, ಬಂಡಾಯ ಸಾಹಿತ್ಯ ಆಂದೋಲನದಲ್ಲಿ ಪ್ರಮುಖ ವ್ಯಕ್ತಿಯಾಗಿ ಗುರುತಿಸಿಕೊಂಡರು. ತಮ್ಮ ಕವನದಲ್ಲಿ ಬಳಸಿಕೊಂಡ ಭಾಷೆಯ ರೀತಿ, ವಿಚಾರವಂತಿಕೆ, ಕಲ್ಪನೆ, ಅಭಿವ್ಯಕ್ತಿಗಳು ವಿಶಿಷ್ಟವಾಗಿ ಗೋಚರಿಸುತ್ತದೆ. ಸಬರದ ಅವರ ಪ್ರಮುಖ ಕವಿತೆಗಳನ್ನು ಈ ಪುಸ್ತಕದಲ್ಲಿ ಕೊಡಲಾಗಿದೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books