ಸಹನಾ (ಕಾದಂಬರಿ)

Author : ಸಾರಾ ಅಬೂಬಕ್ಕರ್

Pages 170

₹ 140.00




Year of Publication: 2013
Published by: ಚಂದ್ರಗಿರಿ ಪ್ರಕಾಶನ
Address: ಮೈಕ್ರೋವೇವ್ ಸ್ಟೇಷನ್ ರಸ್ತೆ, ಮಂಗಳೂರು – 575006.

Synopsys

ನಾಡೋಜ ಡಾ. ಸಾರಾ ಅಬೂಬಕ್ಕರ್ ಅವರ ಕಾದಂಬರಿ-ಸಹನಾ. ಮುಸ್ಲಿಂ ಮಹಿಳೆಯರ ಶೋಷಣೆಯನ್ನು ತಮ್ಮ ಬುಹತೇಕ ಸಾಹಿತ್ಯದ ಮೂಲಕ ಬಹಿರಂಗಗೊಳಿಸಿರುವ ಲೇಖಕಿಯು ಸಹನಾ ಕಾದಂಬರಿಯಲ್ಲಿಯೂ ಬಹುಪತ್ನಿತ್ವದಿಂದ ಮಹಿಳೆ ಅನುಭವಿಸುವ ನೋವನ್ನು ಅನಾವರಣಗೊಳಿಸಿದ್ದಾರೆ. ಈ ಕಥಾವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಸಾರಾ ಅಬೂಬಕ್ಕರ್
(30 June 1936)

ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30ರಂದು  ಕಾಸರಗೋಡಿನ ಚಂದ್ರಗಿರಿ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ತಂದೆ ನ್ಯಾಯವಾದಿಗಳಾಗಿದ್ದ ಪಿ. ಅಹಮದ್ ಅವರು ಮತ್ತು  ತಾಯಿ ಚೈನಾಬಿ ಅವರು. ಸಾರಾ ಅವರ ಪ್ರಾಥಮಿಕ ವಿದ್ಯಾಭ್ಯಾಸ ಅವರ ಹುಟ್ಟಿದೂರಿನಲ್ಲೇ ನೆರವೇರಿತು.  ಮುಂದೆ ಅವರು ಹೈಸ್ಕೂಲುವರೆಗೆ ಕಲಿತದ್ದು ಕಾಸರಗೋಡಿನಲ್ಲಿ. ಎಂಜನಿಯರ್ ಆಗಿದ್ದ ಅಬೂಬಕ್ಕರ್‌ ಅವರೊಡನೆ ಸಾರಾ ಅವರ ವಿವಾಹ ಏರ್ಪಟ್ಟು ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾರಾ ಅವರು ಶಿವರಾಮ  ಕಾರಂತರು, ಇನಾಂದಾರ್, ಭೈರಪ್ಪ, ಅನಂತಮೂರ್ತಿ ಇವರೆಲ್ಲರ ಬರವಣಿಗೆಗೆ ಮಾರು ಹೋಗಿ ಸದಾ ...

READ MORE

Related Books