ಸಾಹಿತ್ಯ ವಿಮರ್ಶೆ

Author : ಬಸವರಾಜ ಸಬರದ

Pages 100

₹ 60.00




Year of Publication: 2021
Published by: ಶ್ರೀ ಸಿದ್ದಲಿಂಗೇಶ್ವರ ಪ್ರಕಾಶನ
Address: ಮುಖ್ಯಬೀದಿ, ಸರಸ್ವತಿ ಗೋದಾಮು, ಸೂಪರ್ ಮಾರ್ಕೆಟ್, ಕಲಬುರಗಿ-585101

Synopsys

ಸಾಹಿತಿ ಡಾ. ಬಸವರಾಜ ಸಬರದ ಅವರ ಕೃತಿ-ಸಾಹಿತ್ಯ ವಿಮರ್ಶೆ. ಕನ್ನಡ ಸಾಹಿತ್ಯ ವಿಮರ್ಶೆ ಮಸುಕಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಸಾಹಿತ್ಯ ವಿಮರ್ಶೆಯ ಈ ಕೃತಿಯು ವಿಮರ್ಶೆ ಕುರಿತಂತೆ ಹೆಚ್ಚು ಚರ್ಚೆ ನಡೆಸಲು ಪ್ರೇರಣೆ ನೀಡುವಂತಿದೆ. ವಿಮರ್ಶೆಯ ವ್ಯಾಖ್ಯಾನ, ಪ್ರಕಾರಗಳು, ಸ್ವರೂಪ, ಉದ್ದೇಶ ಇತ್ಯಾದಿ ಸಂಪೂರ್ಣ ವಿವರಗಳೊಂದಿಗೆ ಕೃತಿಯು ಅರ್ಥಪೂರ್ಣವಾಗಿ, ವಿವಿಧ ಅಧ್ಯಾಯಗಳ ಮೂಲಕ ಚರ್ಚಿಸುತ್ತದೆ.

About the Author

ಬಸವರಾಜ ಸಬರದ
(20 June 1954)

ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್‌ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ.  ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.   ನನ್ನವರ ಹಾಡು, ಹೋರಾಟ, ...

READ MORE

Related Books