ಸಮಗ್ರ ದಾಸ ಸಾಹಿತ್ಯ ಸಂಪುಟ:1

Author : ಶ್ರೀನಿವಾಸ ಹಾವನೂರ

Pages 410

₹ 60.00




Year of Publication: 2003
Published by: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ
Address: ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು- 560002

Synopsys

‘ಸಮಗ್ರ ದಾಸ ಸಾಹಿತ್ಯ ಸಂಪುಟ:1’ ಶ್ರೀ ಶ್ರೀಪಾದರಾಜರ ಮತ್ತು ಶ್ರೀ ವ್ಯಾಸರಾಯರ ಕೀರ್ತನೆಗಳು ಈ ಕೃತಿಯನ್ನು ಡಾ. ಶ್ರೀನಿವಾಸ ಹಾವನೂರ ಹಾಗೂ ಡಾ. ಅರಳುಮಲ್ಲಿಗೆ ಪಾರ್ಥಸಾರಧಿ ಅವರು ಸಂಪಾದಿಸಿದ್ದಾರೆ. ಕೃತಿಯಲ್ಲಿ ಮುನ್ನುಡಿ, ಎರಡು ಮಾತು, ಯೋಜನೆಯ ಕುರಿತು, ಪ್ರಕಾಶಕರ ಮಾತು, ಸಂಪಾದಕ ಮಂಡಳಿಯ ನುಡಿ, ಪ್ರಸ್ತಾವನೆ, ಕೃತಿಗಳು (1) ಶ್ರೀ ಶ್ರೀಪಾದರಾಜರ ಕೃತಿಗಳು, (2) ಶ್ರೀ ವ್ಯಾಸರಾಯರ ಕೀರ್ತನೆಗಳು ಹಾಗೂ ಅನುಬಂಧಗಳಲ್ಲಿ ಶ್ರೀ ಶ್ರೀಪಾದರಾಜರ ಸ್ತುತಿ, ಶ್ರೀವ್ಯಾಸರಾಯರ ಸ್ತುತಿ, ಶ್ರೀ ನರಹರಿತೀರ್ಥರ ಹೆಸರು ಕೃತಿಗಳು, ರಾಮಕೃಷ್ಣ ಮುದ್ರಿಕೆಯ ಹಾಡುಗಳು,ಟಿಪ್ಪಣಿಗಳು, ಕಠಿಣ ಶಬ್ದಗಳ ಅರ್ಥ, ಅಂಕಿತನಾಮ ಸೂಚಿ, ಕೀರ್ತನೆಗಳ ಆಕಾರಾದಿಸೂಚಿ ಸಂಕಲನಗೊಂಡಿವೆ.

About the Author

ಶ್ರೀನಿವಾಸ ಹಾವನೂರ

ಕನ್ನಡ ಸಾಹಿತ್ಯಸಂಶೋಧನೆ ಮಾಡಲು ಮೊತ್ತಮೊದಲು ಕಂಪ್ಯೂಟರ್‌ ಬಳಸಿದವರು ಡಾ. ಶ್ರೀನಿವಾಸ ಹಾವನೂರರು (1928-2010). ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರವಾದುದು, ವೈವಿಧ್ಯಮಯವಾದುದು. ಸಣ್ಣ ಕಥೆ, ಲಲಿತ ಪ್ರಬಂಧ, ಜೀವನ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ  ವಿಮರ್ಶೆ ಮೊದಲಾದ ಪ್ರಕಾರಗಳಲ್ಲಿ 60ಕ್ಕೂ ಮಿಕ್ಕಿ ಕೃತಿಗಳನ್ನು ಹೊರತಂದರು.  ವಿದೇಶದಲ್ಲಿದ್ದ ಕನ್ನಡ ಸಾಹಿತ್ಯವನ್ನು ಮರಳಿ ತಾಯ್ನಾಡಿಗೆ ಕರೆತಂದರು. ಹೊಸಗನ್ನಡ ಅರುಣೋದಯದ ಸಾಹಿತ್ಯವನ್ನು ಮತ್ತೆ ತೆರೆದು ತೋರಿಸಿದರು, ಹಿಂದೆ ಮುಂಬಯಿಯ  ಟಾಟಾ ಮೂಲಭೂತ ವಿಜ್ಞಾನ ಸಂಸ್ಥೆಯ ಗ್ರಂಥಪಾಲಕರಾಗಿದ್ದರು. ಮುಂದೆ ಮಂಗಳೂರು ಮತ್ತು ಮುಂಬಯಿ ವಿ.ವಿ.ಯ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾದರು. ಆಮೇಲೆ ಪುಣೆಯಲ್ಲಿ ಮರಾಠಿ ಕನ್ನಡ ಸ್ನೇಹ ಸಂವರ್ಧನೆಯಲ್ಲಿ ಪಾತ್ರವಹಿಸಿದರು.. ಕೊನೆಗೆ ಕರ್ನಾಟಕ ಸರಕಾರದ ಸಮಗ್ರ ದಾಸ ಸಾಹಿತ್ಯ ಸಂಪಾದಕರಾಗಿ ೫೦ ಸಂಪುಟಗಳ ಪ್ರಕಟಣೆಯ ನೇತೃತ್ವ ವಹಿಸಿದರು. ಕನ್ನಡದ ನಾಡೋಜರೆಂದು ಹೆಸರಾದರು. ...

READ MORE

Related Books