ಸಮಗ್ರ ನಿರೀಶ್ವರವಾದ

Author : ಚಂದ್ರಕಾಂತ ಪೋಕಳೆ

Pages 148

₹ 145.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001
Phone: 08022161900

Synopsys

ಮರಾಠಿಯ ಹೆಸರಾಂತ ಲೇಖಕ ಶರದ ಬೇಡೆಕರ್ ಅವರ ಚಿಂತನಪೂರ್ಣ ಲೇಖನಗಳನ್ನು ಅನುವಾದಕ ಚಂದ್ರಕಾಂತ ಪೋಕಳೆ ಅವರು ಕನ್ನಡಕ್ಕೆ ಅನುವಾದಿಸಿದ ಕೃತಿ-ಸಮಗ್ರ ನಿರೀಶ್ವರವಾದ. ದೇವರ ಬಗೆಗಿನ ಕಲ್ಪನೆ ತೀರಾ ಪ್ರಾಚೀನವಾದುದು. ಮನುಷ್ಯನ ಬುದ್ದಿ-ಮನಸ್ಸು ವಿಕಾಸಗೊಂಡರೂ ದೇವರ ಕಲ್ಪನೆಗಳ ಕುರಿತ ನಂಬಿಕೆಗಳು ಬದಲಾಗಿಲ್ಲ. ದೇವರ ಅಸ್ತಿತ್ವವನ್ನೇ ಪ್ರಶ್ನೆ ಮಾಡಲಾಗುತ್ತಿದೆ. ವೈಜ್ಞಾನಿಕ ಯುಗದಲ್ಲೂ ಪ್ರಶ್ನೆಗಳ ಸಂಖ್ಯೆ ಹೆಚ್ಚುತ್ತಿದೆಯೇ ವಿನಃ ಸಮಾಧಾನಕರ ಉತ್ತರ ಮಾತ್ರ ಸಿಗುತ್ತಿಲ್ಲ. ಜ್ಞಾನಿಗಳು ತಮ್ಮ ಜ್ಞಾನದ ನೆಲೆಯಲ್ಲಿ ಉತ್ತರ ಕಂಡುಕೊಂಡು ಸರ್ವರ ದೇವರು ಒಬ್ಬನೇ ಎಂದು ಹೇಳಿದರೂ ಜನರು ಮಾತ್ರ ತಮಗೆ ತಿಳಿತಿಳಿದಂತೆ ವ್ಯಾಖ್ಯಾನಿಸುವುದು ಇಂದಿಗೂ ಮುಂದುವರಿದಿದೆ. ನಿರೀಶ್ವರವಾದಿಗಳು ಖಡಾಖಂಡಿತವಾಗಿ ದೇವರ ಇರುವಿಕೆಯನ್ನು ಅಲ್ಲಗಳೆದಿದ್ದಾರೆ. ಈ ಅನಾದಿ - ಅನಂತ ವಿಶ್ವವು ಹಲವು ಪಂಡಿತೋತ್ತಮರ ಬುದ್ಧಿ ಮತ್ತೆಗೆ ಸಿಲುಕದ ಸೋಜಿಗವಾದರೂ ವಿಜ್ಞಾನಿಗಳು ಹೆಚ್ಚಿನಂಶ ನಿಗೂಢಗಳನ್ನು ಬಯಲಿಗೆಳೆದು ಪ್ರಯೋಗಸಹಿತ ಪ್ರಮಾಣೀಕರಿಸಿದ್ದಾರೆ. ಈಶ್ವರವಾದಿಗಳು ದೇವರು ನಿರಾಕಾರಿ, ಅಂತಃಚಕ್ಷುಗಳಿಂದ ಮಾತ್ರ ಅರಿಯುವ ಅಗೋಚರ ಶಕ್ತಿ ಎಂದರು. ಹಲವು ದೇವರುಗಳನ್ನು ಸೃಷ್ಟಿಸಿದರು, ತನ್ನಂತೆಯೇ ರೂಪ ಕೊಟ್ಟರು, ಗುಡಿಗಳಲ್ಲಿ ಬಂಧಿಸಿಟ್ಟರು. ಕಲ್ಲು ದೇವರ ವಿಗ್ರಹಕ್ಕೆ ಅಪಾರ ಪ್ರಮಾಣದ ಬೆಲೆಬಾಳುವ ಆಹಾರ ಪದಾರ್ಥಗಳನ್ನು ಪೂಜೆಯ ನೆಪದಲ್ಲಿ ಸುರಿದು ಪೋಲು ಮಾಡಿದರು. ಇಲ್ಲದ ದೇವರನ್ನು ಸೃಷ್ಟಿಸಿ ಮುಗ್ಧ ಜನರನ್ನು ನಂಬಿಸಿ ಸುಲಿಗೆ ಮಾಡಿದರು. ದೇವರ ಹೆಸರಿನಲ್ಲಿ ಮನುಷ್ಯ ಸ್ವಾರ್ಥಿಯಾಗತೊಡಗಿದ!  ನಿರೀಶ್ವರವಾದಿಗಳು ಸ್ವತಂತ್ರವಾಗಿ ಯೋಚಿಸತೊಡಗಿದರು. ಹೀಗೆ,  ಈಶ್ವರವಾದಿ-ನಿರೀಶ್ವರವಾದಿ ತಂತಮ್ಮ ಅನಿಸಿಕೆಗಳನ್ನು ಪ್ರಸ್ತುತಪಡಿಸಿದಂತೆ ರೂಪಿಸಿದ್ದು ಈ ಕೃತಿಯ ವೈಶಿಷ್ಟ್ಯ.

About the Author

ಚಂದ್ರಕಾಂತ ಪೋಕಳೆ
(20 August 1949)

ಲೇಖಕರು, ಪ್ರಖ್ಯಾತ ಅನುವಾದಕರೂ ಆದ ಚಂದ್ರಕಾಂತ ಪೊಕಳೆ ಅವರು 20-08-1949 ರಂದು ಜನಿಸಿದರು. ಹುಟ್ಟೂರು  ಉತ್ತರ ಕನ್ನಡ ಜಿಲ್ಲೆಯ ಮಂಚಿಕೇರಿ. ತಂದೆ- ಮಹಾಬಲೇಶ್ವರ, ತಾಯಿ- ಪಾರ್ವತಿ. ಹೈಸ್ಕೂಲುವರೆಗೆ ಮಂಚಿಕೇರಿಯಲ್ಲಿ ಓದಿದ ಅವರು, ಧಾರವಾಡದ ಕಾಲೇಜಿನಿಂದ ಬಿ.ಎ ಪದವಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿಗಳಿಸಿದ್ದಾರೆ. ಧಾರವಾಡದಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಗೌರೀಶ ಕಾಯ್ಕಿಣಿ, ಶಂಬಾ, ಬೇಂದ್ರೆ, ಇವರುಗಳ ಸಾಹಿತ್ಯದಿಂದ ಪ್ರೇರಿತರಾದ ಪೊಕಳೆ, ಅಧ್ಯಾಪಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೇಡಕಿಹಾಳದ ಲಠ್ಠೆ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕ ವೃತ್ತಿ ಆರಂಭಿಸಿದ ಅವರು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ...

READ MORE

Related Books