ಸಮಗ್ರ ವಿಮರ್ಶೆ ಸಂಪುಟ-1

Author : ಗಿರಡ್ಡಿ ಗೋವಿಂದರಾಜ

Pages 654

₹ 428.00




Year of Publication: 2015
Published by: ಸಪ್ನ ಬುಕ್ ಹೌಸ್
Address: ಆರ್.ಓ. #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9

Synopsys

ಕನ್ನಡ ಸಾಹಿತ್ಯದಲ್ಲಿ ಖ್ಯಾತ ವಿಮರ್ಶಕ ಖ್ಯಾತಿಯ ಗಿರಡ್ಡಿ ಗೋವಿಂದರಾಜ ಅವರ ಸಮಗ್ರ ವಿಮರ್ಶೆ-ಬರೆಹಗಳನ್ನು ಸಂಕಲಿಸಿದ ಕೃತಿ ಇದು. ವಿವಿಧ ಸಂಪುಟಗಳಡಿ ಅವರ ವಿಮರ್ಶೆ ಸಾಹಿತ್ಯವನ್ನು ಪ್ರಕಟಿಸಿದ್ದು, ಆ ಪೈಕಿ ಈ ಕೃತಿಯು ಮೊದಲನೇ ಸಂಪುಟವಾಗಿದೆ. ಇಲ್ಲಿಯ ವಿಮರ್ಶೆಯ ಶೈಲಿ, ವೈವಿಧ್ಯತೆ ಎಲ್ಲವೂ ಉತ್ತಮ ಸಾಹಿತ್ಯದ ಮಾನದಂಡವಾಗಿದ್ದು, ಸಾಹಿತ್ಯ ಹಾಗೂ ವಿಮರ್ಶೆ ಕ್ಷೇತ್ರದಲ್ಲಿ ಶ್ರೇಷ್ಠ ಆಕರ ಗ್ರಂಥಗಳಾಗಿವೆ.

About the Author

ಗಿರಡ್ಡಿ ಗೋವಿಂದರಾಜ
(22 September 1939 - 11 May 2018)

ಖ್ಯಾತ ವಿಮರ್ಶಕ ಗಿರಡ್ಡಿ ಗೋವಿಂದರಾಜ ಅವರು ಮೂಲತಃ ಧಾರವಾಡ ಜಿಲ್ಲೆಯ ಅಬ್ಬಿಗೇರಿಯವರು. ತಂದೆ ಅಂದಾನಪ್ಪ ಮತ್ತು ತಾಯಿ ನಾಗಮ್ಮ. ಕನ್ನಡ ಮತ್ತು ಇಂಗ್ಲಿಷ್‌ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್‌ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಸಣ್ಣಕತೆ-ಪ್ರಬಂಧಗಳನ್ನು ಪ್ರಕಟಿಸಿದ್ದಾರೆ. ಇಂಗ್ಲೆಂಡ್, ಬೆಲ್ಸಿಯಂ, ಫ್ರಾನ್ಸ್, ಸರೆಂಡ್, ಇಟಲಿಗಳಲ್ಲಿ ಉಪನ್ಯಾಸ ನೀಡಿರುವ ಅವರು ಇಂಗ್ಲಿಷ್‌ ಸ್ಟಡೀಸ್ ನಲ್ಲಿ ಡಿಪ್ಲಮೊ ಪಡೆದು ಕಲಬುರ್ಗಿಯ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದರು. ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿ ವೇತನ ಪಡೆದು  ಇಂಗ್ಲೆಂಡಿಗೆ ಭಾಷಾ ವಿಜ್ಞಾನದಲ್ಲಿ ವಿಶೇಷ ಅಧ್ಯಯನ ನಡೆಸಿದರು. ಅವರು ಹೈಸ್ಕೂಲಿನಲ್ಲಿರುವಾಗಲೇ 'ಶಾರದಾಲಹರಿ' ಎಂಬ ನೀಳ್ಗವಿತೆ ಪ್ರಕಟಿಸಿದ್ದರು. ನಾಟಕ ಅಕಾಡೆಮಿಯ ಫೆಲೋಶಿಪ್ ದೊರೆತಿರುವ ...

READ MORE

Related Books