ಸಂಕಥನ

Author : ಕರೀಗೌಡ ಬೀಚನಹಳ್ಳಿ

Pages 184

₹ 80.00




Year of Publication: 2010
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

2000ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನವಾಗಿದ್ದ ಈ ಕೃತಿಯಲ್ಲಿ ಲೇಖಕರಾದ ಕರೀಗೌಡ ಬೀಚನಹಳ್ಳಿ ಯವರು ಸಣ್ಣ ಕಥೆಗಳ ಕುರಿತು ಆಳವಾಗಿ ಅಧ್ಯಯನ ಮಾಡಿ ದಾಖಲಿಸಿದ ಉಪಯುಕ್ತವಾದ ನಿರೂಪಣೆಗಳನ್ನು ಒಳಗೊಂಡಿವೆ. 20ನೇ ಶತಮಾನದ ಸಣ್ಣಕಥೆಯ ರಚನೆಯ ಹಿಂದಿನ ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಒತ್ತಡ, ಪ್ರಭಾವಗಳನ್ನು ಕುರಿತು ಇಲ್ಲಿ ವಿಶ್ಲೇಷಿಸಿದ್ದಾರೆ. ಮಾಸ್ತಿ, ನಿರಂಜನ, ಅನಂತಮೂರ್ತಿ, ತೇಜಸ್ವಿ, ದೇವನೂರು ಹಾಗೂ ಕೆಲವು ಕತೆಗಾರ್ತಿಯರ ಪ್ರಾತಿನಿಧಿಕ ಕಥೆಗಳ ಅಧ್ಯಯನದ ಮೂಲಕ ಸಂಕಥನ ಒಂದು ಉಪಯುಕ್ತ ಕುರುಹಾಗಿ ಓದುಗರ ಮನಸಿನಲ್ಲಿ ನಿಲ್ಲುತ್ತದೆ.

About the Author

ಕರೀಗೌಡ ಬೀಚನಹಳ್ಳಿ
(10 September 1951)

ಕರೀಗೌಡ ಬೀಚನಹಳ್ಳಿ ಅವರು 1951 ಸೆಪ್ಟೆಂಬರ್‌ 10ರಂದು ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಬೀಚನಹಳ್ಳಿಯಲ್ಲಿ ಜನಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಇವರು, ವ್ಯಷ್ಟಿ-ಸಮಷ್ಟಿ ಪ್ರಬಂಧ ಮಂಡಿಸಿ  ಪಿಎಚ್‌ಡಿ ಪದವಿಯನ್ನು ಪಡೆದಿದ್ದಾರೆ. .ಬೆಂಗಳೂರು ವಿಶ್ವವಿದ್ಯಾಲಯದ ಪ್ರಸಾರಂಗದಲ್ಲಿ ಕಾರ್ಯ ನಿರ್ವಹಿಸಿದ ನಿವರು, ಹಂಪಿ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಪ್ರಸಾರಂಗದ ನಿರ್ದೇಶಕರಾಗಿ ನಂತರ ಕುಲಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.  ಕನ್ನಡ ಸಾಹಿತ್ಯದೆಡೆಗಿನ ಒಲವು ಕಾಲೇಜು ದಿನಗಳಿಂದಲೇ ಸಾಹಿತ್ಯ ಕೃಷಿಯಲ್ಲಿ ತೊಡಗುವಂತೆ ಮಾಡಿತ್ತು. ಇವರು ಬರೆದ ಕಥೆ, ಕವನಗಳು ತುಮಕೂರು ವಿಶ್ವವಿದ್ಯಾಲಯ ಪದವಿ ತರಗತಿಗಳಿಗೆ ಪಠ್ಯವಾಗಿವೆ. ಇವರ ಕಥೆಗಳು ...

READ MORE

Related Books