ಸರ್ಪಯಾಗ

Author : ಕೆ.ಎಸ್‍. ನಾರಾಯಣಾಚಾರ್ಯ

Pages 328

₹ 350.00




Year of Publication: 2020
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ-580020
Phone: 09448110034

Synopsys

ಲೇಖಕ ಡಾ. ಕೆ.ಎಸ್. ನಾರಾಯಣಾಚಾರ್ಯ ಅವರು ಬರೆದ ಕೃತಿ-ಸರ್ಪಯಾಗ. ಮಹಾಭಾರತದ ಕಥೆಯ ಪೂರ್ವಕಾಂಡ (ಭಾಗ-1)ವನ್ನು ಬಿಂಬಿಸುವ ಕೃತಿ ಇದು. ಜನಮೇಜಯನ ಸರ್ಪಯಾಗ ಮತ್ತು ಸರ್ಪ ಮತ್ತು ಗರುಡರು ಹುಟ್ಟಿದ್ದ ಜನ್ಮ ವೃತ್ತಾಂತ. ಹಸ್ತಿನಾವತಿಯ ಮಹಾರಾಜ ಜನಮೇಜಯ, ಉತ್ತಂಕ ಹೀಗೆ ಮಹಾಭಾರತ ಪೂರ್ವ ಕಾಲದ ಕಥೆಯನ್ನು ಸುರ್ದೀಘವಾಗಿ ಬರೆದಿದ್ದು ಈ ಕೃತಿಯ ವೈಶಿಷ್ಟ್ಯ.

About the Author

ಕೆ.ಎಸ್‍. ನಾರಾಯಣಾಚಾರ್ಯ
(31 October 1933 - 26 November 2021)

ಹಿರಿಯ ವಿದ್ವಾಂಸ ಹಾಗೂ ಪ್ರವಚನಕಾರರೂ ಆಗಿರುವ ಪ್ರೊ. ಕೆ.ಎಸ್. ನಾರಾಯಣಾಚಾರ್ಯರು ಮೂಲತಃ ಬೆಂಗಳೂರು ಜಿಲ್ಲೆಯ  (ಈಗಿನ ಕನಕಪುರ) ಕನಕನಹಳ್ಳಿಯವರು. ತಂದೆ ಕೆ.ಎನ್. ಶ್ರೀನಿವಾಸ ದೇಶಿಕಾಚಾರ್. ತಾಯಿ ರಂಗನಾಯಕಮ್ಮ. ವೈದಿಕ ವಿದ್ವಾಂಸರ ಕುಟುಂಬ ಇವರದು.ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎಸ್.ಸಿ. ಪದವೀಧರರು. ನಂತರ ಬಿ.ಎ. ಆನರ್ಸ್‌ ಮಾಡಿ, ಆಧುನಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಡಬ್ಲ್ಯು.ಬಿ. ಯೇಟ್ಸ್ ಮತ್ತು ಟಿ.ಎಸ್. ಎಲಿಯೆಟ್‌ ಅವರ ಕಾವ್ಯದ ಮೇಲೆ ಭಾರತೀಯ ಸಂಸ್ಕೃತಿಯ ಕುರಿತು ಅಧ್ಯಯನ ನಡೆಸಿ ಪಿಎಚ್.ಡಿ. ಪಡೆದರು. ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ, ಆ ಕಾಲೇಜಿನ ಪ್ರಾಂಶುಪಾಲರಾಗಿ ನಿವೃತ್ತರಾದರು. ಸದ್ಯ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ವೇದಗಳು, ರಾಮಾಯಣ, ...

READ MORE

Related Books