ಸವಿತಾ ನಾಗಭೂಷಣ ಅವರ ಸ್ತ್ರೀಲೋಕ

Author : ಸವಿತಾ ನಾಗಭೂಷಣ

Pages 108

₹ 75.00




Year of Publication: 2009
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಕನ್ನಡ ಸಾಹಿತ್ಯವನ್ನು ಪ್ರವೇಶಿಸ ಬಯಸುವ ಹೊಸ ಓದುಗರಿಗೆ ಕನ್ನಡದ ಪ್ರಮುಖ ಲೇಖಕರ ಆಯ್ದ ಬರಹಗಳ ಕಿರುವಾಚಿಕೆಗಳು ಲಭ್ಯವಾಗಬೇಕು  ಆಧುನಿಕ ಪೂರ್ವ ಕನ್ನಡದ ಮಹತ್ಕೃತಿಗಳೂ (ಟಿಪ್ಪಣಿಗಳೊಂದಿಗೆ) ಹಾಗೂ ಹೊಸಗನ್ನಡದ ಪ್ರಮುಖ ಲೇಖಕರ ಆಯ್ದ ಕಥೆ-ಕವನ-ಪ್ರಬಂಧಗಳೂ ಮತ್ತು ಕೆಲವು ಕನ್ನಡೇತರ ಲೇಖಕರ ಆಯ್ದ ಬರಹಗಳ ಸಂಗ್ರಹಗಳೂ ಸೇರಿವೆ. ಆಯಾ ಲೇಖಕರನ್ನು ಮೊದಲ ಬಾರಿಗೆ ಪರಿಚಯಿಸಿಕೊಳ್ಳುವವರಿಗೆ ಉಪಯುಕ್ತವಾಗುವಂತೆ ಈ ಪುಸ್ತಕಗಳ ವಸ್ತು- ವಿನ್ಯಾಸಗಳನ್ನು ರೂಪಿಸಲಾಗಿದೆ. ಇದೇ ಹಿನ್ನಲೆಯಲ್ಲಿ ಸವಿತಾ ನಾಗಭೂಷಣ ಅವರು ಸ್ತ್ರೀವಾದವನ್ನು ಪರಿಚಯಿಸುವ ನಿಟ್ಟಿನಲ್ಲಿ ಬರೆದಿರುವ ಕೃತಿ ಇದಾಗಿದೆ. 

About the Author

ಸವಿತಾ ನಾಗಭೂಷಣ

ಚಿಕ್ಕಮಗಳೂರಿನಲ್ಲಿ ಜನಿಸಿದ ಸವಿತಾ ನಾಗಭೂಷಣ ಅವರು ಬೆಳೆದದ್ದು ಮತ್ತು ಶಿಕ್ಷಣ ಪಡೆದದ್ದು ಶಿವಮೊಗ್ಗದಲ್ಲಿ. ಮಲೆನಾಡಿನ ಅನುಭವದ ಹಿನ್ನೆಲೆಯಲ್ಲಿ ಅವರ ಬಹಳಷ್ಟು ಕವಿತೆಗಳಲ್ಲಿ ಗಿಡ-ಮರ, ಹಸಿರು-ಹೂ-ಹಣ್ಣು ಮತ್ತು ಹೊಳೆ-ಮಳೆ- ಮೋಡಗಳ ಜೀವಂತ ರೂಪಕ ಒಳಗೊಂಡಿರುತ್ತವೆ. ವರ್ತಮಾನದ ಮನುಷ್ಯನ ಆಳದ ಸಂತೋಷ-ನೆಮ್ಮದಿ, ದುಃಖ- ವಿಷಾದಗಳನ್ನು ಅಂತಃಕರಣಪೂರ್ವಕವಾಗಿ ದಾಖಲಿಸುತ್ತವೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕಾವ್ಯಕ್ಕಾಗಿ ನೀಡುವ ಪ್ರಶಸ್ತಿ ಪಡೆದ ಮೊದಲ ಕವಯತ್ರಿಯಾದ (ನಾ ಬರುತ್ತೇನೆ ಕೇಳು) ಸವಿತಾ ಅವರ ಎಲ್ಲ ಸಂಕಲನಗಳಿಗೆ ವಿವಿಧ ಸಂಘ-ಸಂಸ್ಥೆಗಳ ಬಹುಮಾನ -ಪ್ರಶಸ್ತಿ ಸಂದಿವೆ. ಅವರ ವಿಶಿಷ್ಟ ಕಾದಂಬರಿ ’ಸ್ತ್ರೀಲೋಕ’ಕ್ಕೆ ಎಂ.ಕೆ. ಇಂದಿರಾ ಮತ್ತು ಬಿ.ಎಚ್. ಶ್ರೀಧರ್‍ ...

READ MORE

Related Books