ಶ್ರೀಚಕ್ರೇಶ್ವರಿ

Author : ತ.ರಾ.ಸು. (ತ.ರಾ. ಸುಬ್ಬರಾವ್)

Pages 192

₹ 120.00

Synopsys

ತ.ರಾ.ಸುಬ್ಬರಾಯರ ಕೊನೆಯ ಕಾದಂಬರಿ ಶ್ರೀಚಕ್ರೇಶ್ವರಿ. ತ.ರಾ.ಸು ಅಗಲಿಕೆಯ ನಂತರ ನಾ.ಪ್ರಭಾಕರ್ ಅವರು ತ.ರಾ.ಸು ಅವರು ಹೇಳಿದ ಕಥಾಹಂದರ, ವಿಷಯ ಮತ್ತು ಟಿಪ್ಪಣಿಗಳನ್ನು ಆಧಾರವಾಗಿ ಇಟ್ಟುಕೊಂಡು ಈ ಕಾದಂಬರಿಯನ್ನು ಸಂಪೂರ್ಣಗೊಳಿಸಿದ್ದಾರೆ. ಈ ಕಾದಂಬರಿಯಲ್ಲಿ ಚಕ್ರಪಲ್ಲಿ ಎಂಬ ಊರಿನ ಬಗ್ಗೆ, ಅಲ್ಲಿಯ ಜನರ, ಲೋಕವ್ಯವಹಾರದ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ಲೇಖಕರು. 

About the Author

ತ.ರಾ.ಸು. (ತ.ರಾ. ಸುಬ್ಬರಾವ್)
(12 June 1906 - 10 April 1984)

ತಳುಕು ರಾಮಸ್ವಾಮಯ್ಯ ಸುಬ್ಬರಾಯ(ತ.ರಾ.ಸು) ಹುಟ್ಟಿದ್ದು 1906 ಜೂನ್ 12 ಚಿತ್ರದುರ್ಗ ಜಿಲ್ಲೆಯ ಚೆಳ್ಳೆಕೆರೆ ತಾಲ್ಲೂಕಿನ ತಳುಕು ಎಂಬ ಗ್ರಾಮದಲ್ಲಿ. ಮೂಲ ಆಂಧ್ರಪ್ರದೇಶದವರು. ತಂದೆ ರಾಮಸ್ವಾಮಯ್ಯ ಅವರು ತಳುಕು ಗ್ರಾಮಕ್ಕೆ ಬಂದು ನಂತರ ಚಿತ್ರದುರ್ಗದಲ್ಲಿ ಪ್ಲೀಡರ್ ಆಗಿದ್ದರು. ಸುಬ್ಬಾರಾಯರು ಇಂಟರ್ ಮೀಡಿಯೆಟ್ನಲ್ಲಿದ್ದಾಗ ದೇಶದ ಸ್ವಾತಂತ್ಯ್ರ ಚಳವಳಿಯಲ್ಲಿ ಧುಮುಕಿದರು. ಪ್ರಮುಖ ಕೃತಿಗಳು: ಕಂಬನಿಯ ಕುಯಿಲು, ರಕ್ತರಾತ್ರಿ, ದುರ್ಗಾಸ್ತಮಾನ, ನೃಪತುಂಗ, ಸಿಡಿಲ ಮೊಗ್ಗು, ಶಿಲ್ಪಶ್ರೀ, ಕಸ್ತೂರಿ ಕಂಕಣ, ತಿರುಗುಬಾಣ-, ಈ ಕಾದಂಬರಿಗಳು ಬರೆಹಾ ಕೌಶಲ್ಯಕ್ಕೆ ಹಿಡಿದ ಕನ್ನಡಿ. ಚಲನಚಿತ್ರವಾದ ಕಾದಂಬರಿಗಳು: ಚಂದವಳ್ಳಿಯ ತೋಟ, ಹಂಸಗೀತೆ (1956ರಲ್ಲಿ ಬಸಂತ ಬಹಾರ್ ಹೆಸರಲ್ಲಿ ಹಿಂದಿ ಚಲನಚಿತ್ರವಾಗಿತ್ತು.) ನಾಗರಹಾವು, ...

READ MORE

Related Books