ಶಬರಿಯ ಅವಸರ

Author : ಚೇತನಾ ತೀರ್ಥಹಳ್ಳಿ (ಗಾಯತ್ರಿ ಎಚ್‌.ಎನ್)

Pages 112

₹ 80.00
Year of Publication: 2014
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 0802661 7100

Synopsys

ಲೇಖಕಿ ಚೇತನಾ ತೀರ್ಥಹಳ್ಳಿ ಅವರ ಕವನ ಸಂಕಲನ-ಶಬರಿಯ ಅವಸರ. ಕಾವ್ಯವಸ್ತು, ಶೈಲಿ, ಸಾಮಾಜಿಕ ಹೊಣೆಗಾರಿಕೆ ಎಚ್ಚರ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕವಿತೆಗಳ ಓದುಗರ ಗಮನ ಸೆಳೆಯುತ್ತವೆ. ಲೇಖಕ ಟಿ.ಎನ್. ಸೀತಾರಾಮ ಅವರು ಕೃತಿಗೆ ಬೆನ್ನುಡಿ ಬರೆದು ‘ಇವತ್ತಿನ ವೇಗದ ಶೈಲಿಯ ಬದುಕಿಗೆ ಇಲ್ಲಿಯ ಕವನಗಳು ಹೊಂದಿಕೊಂಡಿವೆ. ರೋಚಕವಾಗಿವೆ. ಬುದ್ಧಿಪ್ರಧಾನವಾಗಿವೆ. ಜಗತ್ತಿಗೆ ಪ್ರಿಯವಾಗಬಲ್ಲ ಜಾಣಮಾತುಗಳನ್ನೂ, ಪದ ಮತ್ತು ಭಾವದ ಚಮತ್ಕಾರಗಳನ್ನೂ ಹೊತ್ತು ನಿಂತಿವೆ’ ಎಂದು ಪ್ರಶಂಸಿಸಿದ್ದಾರೆ.

About the Author

ಚೇತನಾ ತೀರ್ಥಹಳ್ಳಿ (ಗಾಯತ್ರಿ ಎಚ್‌.ಎನ್)

ಹುಟ್ಟೂರು ತೀರ್ಥಹಳ್ಳಿ. ಮೂಲ ಹೆಸರು ಗಾಯತ್ರಿ. ಅಲಾವಿಕಾ ಮತ್ತೊಂದು ಕಾವ್ಯನಾಮ. ಮೂವತ್ತು ವರ್ಷಗಳಿಂದ ಗದ್ಯ - ಪದ್ಯ ರಚನೆಯಲ್ಲಿ ತೊಡಗಿಕೊಂಡಿದ್ದು, ಸ್ವತಂತ್ರ ಕೃತಿ, ಅನುವಾದ, ಸಂಪಾದನೆ ಸೇರಿದಂತೆ 15 ಪುಸ್ತಕಗಳು ಪ್ರಕಟವಾಗಿವೆ. ‘ಉಫೀಟ್’ – ಉದಯೋನ್ಮುಖ ಬರಹಗಾರರ ಪ್ರೋತ್ಸಾಹ ಧನ ಯೋಜನೆಯಡಿಯಲ್ಲಿ ಪ್ರಕಟಗೊಂಡ ಮೊದಲ ಪದ್ಯ ಸಂಕಲನ. ‘ಭಾಮಿನಿ ಷಟ್ಪದಿ’ ಅಂಕಣ ಸಂಕಲನವಾಗಿದ್ದು, ಎರಡು ಮುದ್ರಣ ಕಂಡಿದೆ. ‘ಗುಟ್ಟು ಬಚ್ಚಿಡಲು ಬರುವುದಿಲ್ಲ’, ‘ಶಬರಿಯ ಅವಸರ’ ಮತ್ತು ‘ಸೂರ್ಯನೆದೆಯ ನೀರಬೀಜ’ ಮುದ್ರಿತ ಪದ್ಯ ಸಂಕಲನಗಳು; ‘ಕಣೇ ಲಾ ಪದ್ಯಗಳು’ ಇ - ಬುಕ್ ಸಂಕಲನವಾಗಿ ಪ್ರಕಟವಾಗಿದೆ. ‘ಬಿಸಿಲ ಚೂರಿನ ಬೆನ್ನು’, ‘ಅಧ್ಯಾತ್ಮ ಡೈರಿ’ ಬ್ಲಾಗ್ ಮತ್ತು ವೆಬ್‍ಸೈಟ್‍ಗಳಲ್ಲಿ ಪ್ರಕಟಗೊಂಡ ...

READ MORE

Related Books