ಹಿಂದಿ ಲೇಖಕಿ ನಾಸೀರಾ ಶರ್ಮ ಅವರ ಕಾದಂಬರಿಯನ್ನು ವಿಜಯಾ ಸುಬ್ಬರಾವ್ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಶಾಲ್ಮಲಿ ಸ್ತ್ರೀಚಿಂತನೆಯ ಮತ್ತೊಂದು ಆಯಾಮವಾಗಿ ಕಾಣುತ್ತದೆ. ಗಂಡು ಹೆಣ್ಣಿನ ನಡುವಿನ ಸಂಘರ್ಷದ ಕಥೆ ಹೇಳುವ ಈ ಕಾದಂಬರಿ, ಕನ್ನಡದ ತರಂಗ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಕೂಡಾ ಜನಮನ್ನಣೆಗಳಿಸಿದೆ. ಜೊತೆಗೆ ಅನುವಾದ ಅಕಾಡೆಮಿ ಪುರಸ್ಕೃತ ಕೃತಿಯಾಗಿದೆ.
ವಿಜಯಾ ಸುಬ್ಬರಾಜ್ ಅವರು ಬೆಂಗಳೂರಿನಲ್ಲಿ 1940 ಏಪ್ರಿಲ್ 20ರಂದು ಜನಿಸಿದರು. ತಾಯಿ ಲಕ್ಷ್ಮಿ, ತಂದೆ ಸೀತಾರಾಂ. ಇಂಗ್ಲಿಷ್ ಮತ್ತು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕನ್ನಡ ಸಾಹಿತ್ಯ ಕ್ಷೇತ್ರದ ಕೃಷಿಯಲ್ಲಿ ತೊಡಗಿಕೊಂಡಿರುವ ಇವರು ಬಿಯುಸಿಟಿಎ ನ ಉಪಾಧ್ಯಕ್ಷೆ, ಕನ್ನಡ ನುಡಿ ನಿಯತಕಾಲಿಕೆಯ ಸಂಪಾದಕಿ, ನಂಜನಗೂಡು ತಿರುಮಲಾಂಬ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವಿಜಯಾ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ನೀಲಗಂಗಾ ಪ್ರಶಸ್ತಿ, ಅತ್ತಿಮಬ್ಬೆ ...
READ MORE