ಸೊಂಡೂರು ಭೂಹೋರಾಟ

Author : ಅರುಣ್ ಜೋಳದಕೂಡ್ಲಿಗಿ

Pages 174

₹ 80.00




Published by: ಪ್ರಸಾರಾಂಗ ಕನ್ನಡ ವಿಶ್ವವಿದ್ಯಾಲಯ
Address: ಹಂಪಿ, ವಿಜಯನಗರ ಜಿಲ್ಲೆ

Synopsys

‘ಸೊಂಡೂರು ಭೂಹೋರಾಟ’ ಕೃತಿಯು ಅರುಣ್ ಜೋಳದ ಕುಡ್ಲಿಗಿ ಅವರ ಅಧ್ಯಯನ ಲೇಖನಗಳ ಸಂಕಲನವಾಗಿದೆ. ಈ ಕೃತಿಯಲ್ಲಿನ ಕೆಲವೊಂದು ವಿಚಾರೆಗಳು ಹೀಗಿವೆ : ಕರ್ನಾಟಕದ ಸಮಾಜವಾದಿ ಚಳವಳಿಗಳ ಅಧ್ಯಯನಕ್ಕೆ ಕನ್ನಡ ವಿವಿಯಲ್ಲಿ ಸ್ಥಾಪಿಸಲಾಗಿರುವ ರಾಮಮನೋಹರ ಲೋಹಿಯಾ ಅಧ್ಯಯನ ಪೀಠದ ಸಂಚಾಲಕ ರಹಮತ್ ತರೀಕೆರೆ ಅವರ ಮಾರ್ಗದರ್ಶನದಲ್ಲಿ ಅರುಣ್ ಅವರು ಅನೇಕ ಹಳ್ಳಿಗಳನ್ನು ತಿರುಗಾಡಿ, ಹೋರಾಟದಲ್ಲಿ ಪಾಲುಗೊಂಡ ಜನರನ್ನು, ಹಲವು ನಾಯಕರನ್ನು ಭೇಟಿ ಮಾಡಿ ಪೊಲೀಸ್ ಇಲಾಖೆ ದಾಖಲೆಗಳು, ವಿಧಾನಸಭೆಯ ಕಲಾಪಗಳನ್ನು ಪರಿಶೀಲಿಸಿ ಈ ಪುಸ್ತಕವನ್ನು ಸಿದ್ಧಪಡಿಸಿದ್ದಾರೆ. ಕೆ.ಕೆ.ಮಕಾಳಿಯವರ ಮುಖಪುಟ ವಿನ್ಯಾಸ, ಸರಳ-ಅರ್ಥಪೂರ್ಣವಾಗಿದೆ.

 

About the Author

ಅರುಣ್ ಜೋಳದಕೂಡ್ಲಿಗಿ
(13 February 1980)

ಅರಣ್ ಜೋಳದಕೂಡ್ಲಿಗಿ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜೋಳದಕೂಡ್ಲಿಗಿಯ ಜಿ. ಹನುಮಂತಪ್ಪ, ಎಸ್. ನಾಗರತ್ನಮ್ಮ ಅವರ ಮಗನಾಗಿ 13.02.1980 ರಲ್ಲಿ ಜನಿಸಿದರು. ಕೂಡ್ಲಿಗಿ ತಾಲೂಕಿನ ಹಾರಕನಾಳು, ಉಜ್ಜಿನಿ, ಕೊಟ್ಟೂರಿನಲ್ಲಿ ಪದವಿವರೆಗಿನ ಶಿಕ್ಷಣ ಮುಗಿಸಿದ ಅವರು ಜಾನಪದ ಎಂ.ಎ ಮತ್ತು ಕನ್ನಡ ಸಾಹಿತ್ಯದಲ್ಲಿ ಎಂ.ಎ ಸ್ನಾತಕೋತ್ತರ ಪದವಿಗಳನ್ನು ಕನ್ನಡ ವಿಶ್ವವಿದ್ಯಾಲಯದಲ್ಲಿ ಪಡೆದರು. ಅಲ್ಲಿಯೇ ಪಿಎಚ್.ಡಿ ಪದವಿ ಪಡೆದು ಸದ್ಯಕ್ಕೆ ಪ್ರೊ.ರಹಮತ್ ತರೀಕೆರೆ ಅವರ ಮಾರ್ಗದರ್ಶನದಲ್ಲಿ ಜನಪದ ಕವಿಗಳ ಕುರಿತು ಪೋಸ್ಟ್ ಡಾಕ್ಟರಲ್ ಉನ್ನತ ಸಂಶೋಧನೆಯಲ್ಲಿ ತೊಡಗಿದ್ದಾರೆ. ಅರುಣ್ ಅವರ ಪ್ರಕಟಿತ ಕೃತಿಗಳು: ನೆರಳು ಮಾತನಾಡುವ ಹೊತ್ತು (ಕವಿತೆ, 2004) ...

READ MORE

Related Books